ಶನಿವಾರ, ಡಿಸೆಂಬರ್ 4, 2021
26 °C

42ನೇ ವಸಂತಕ್ಕೆ ಕಾಲಿಟ್ಟ ಪ್ರಭಾಸ್‌: ಅನುಷ್ಕಾ ಸೇರಿದಂತೆ ಗಣ್ಯರಿಂದ ಶುಭ ಹಾರೈಕೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ನಟ ಪ್ರಭಾಸ್‌ ಅವರು ಇಂದು (ಶನಿವಾರ) 42ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಸೇರಿದಂತೆ ತೆಲುಗು ಚಿತ್ರರಂಗದ ಗಣ್ಯರು ಶುಭ ಹಾರೈಸಿದ್ದಾರೆ.

‘ಜನ್ಮದಿನದ ಶುಭಾಶಯಗಳು ಪ್ರಭಾಸ್‌, ನಿಮ್ಮ ಜೀವನದಲ್ಲಿ ಎಲ್ಲವೂ ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ನಿಮ್ಮ ಎಲ್ಲಾ ಸಿನಿಮಾಗಳು ಪ್ರೇಕ್ಷಕರ ಮನ ಗೆಲ್ಲುವಂತಾಗಲಿ. ನಿಮಗೆ ಸದಾಕಾಲ ಸಂತೋಷ ಮತ್ತು ಉತ್ತಮ ಆರೋಗ್ಯ ಲಭಿಸಲಿ ಎಂದು ಆಶಿಸುತ್ತೇನೆ’ ಎಂದು ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಫೇಸ್‌ಬುಕ್‌ನಲ್ಲಿ ಶುಭ ಕೋರಿದ್ದಾರೆ.

ಪ್ರಭಾಸ್‌ಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ನಟಿ ಪೂಜಾ ಹೆಗ್ಡೆ, ನಟರಾದ ರವಿತೇಜಾ, ವೆಂಕಟೇಶ್‌, ಸುನೀಲ್‌ ಸೇರಿದಂತೆ ಹಲವರು ಟ್ವಿಟರ್‌ನಲ್ಲಿ ಶುಭ ಹಾರೈಸಿದ್ದಾರೆ.

ಪ್ರಭಾಸ್‌ ಹುಟ್ಟುಹಬ್ಬಕ್ಕೆ ‘ರಾಧೆ ಶ್ಯಾಮ್’ ಚಿತ್ರತಂಡ ಟೀಸರ್‌ ಬಿಡುಗಡೆ ಮಾಡುವ ಮೂಲಕ ಭರ್ಜರಿ ಉಡುಗೊರೆ ನೀಡಿದೆ.  ರಾಧಾಕೃಷ್ಣ ಕುಮಾರ್​ ನಿರ್ದೇಶನದ ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ತೆಲುಗಿನ ಬಹು ನಿರೀಕ್ಷಿತ ಚಿತ್ರಗಳಲ್ಲಿ ಇದು ಒಂದಾಗಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಸದ್ಯ ಪ್ರಭಾಸ್,​ ‘ರಾಧೆ ಶ್ಯಾಮ್​’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರ ಮುಂದಿನ ವರ್ಷ ಜನವರಿ 14ರಂದು ಬಿಡುಗಡೆಯಾಗಲಿದೆ. ಪ್ರಶಾಂತ್​ ನೀಲ್​ ನಿರ್ದೇಶನದಲ್ಲಿ ಹೊಂಬಾಳೆ ಫಿಲಂಸ್​ ನಿರ್ಮಿಸುತ್ತಿರುವ ‘ಸಲಾರ್’​ ಚಿತ್ರದ ಚಿತ್ರೀಕರಣವೂ ನಡೆಯುತ್ತಿದೆ. ಈ ಸಿನಿಮಾದಲ್ಲಿ ಪ್ರಭಾಸ್​ಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಂಡಿದ್ದಾರೆ.

ಬಾಲಿವುಡ್​ ನಿರ್ದೇಶಕ  ಓಂ ರಾವತ್​ ಅವರ ನಿರ್ದೇಶನದ ‘ಆದಿಪುರುಷ್’​ ಸಿನಿಮಾದಲ್ಲಿ ರಾಮನ ಪಾತ್ರಧಾರಿಯಾಗಿ ಕಾಣಿಸಿಕೊಳ್ಳಲಿರುವ ಪ್ರಭಾಸ್​ಗೆ ನಾಯಕಿಯಾಗಿ ಕೃತಿ ಸನೋನ್​ ನಟಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಈಗಾಗಲೇ ಆರಂಭವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು