ಗುರುವಾರ , ಜನವರಿ 21, 2021
27 °C

ಸೂಪರ್ ಸ್ಟಾರ್ ರಜನಿಕಾಂತ್‌ಗೆ 70ನೇ ಜನ್ಮದಿನದ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್, ಹಿರಿಯ ನಟ ರಜನಿಕಾಂತ್ ಇಂದು (ಡಿ.12) 70ನೇ ವಸಂತಕ್ಕೆ ಕಾಲಿರಿಸಿದ್ದಾರೆ. 

ತಮ್ಮ ವಿಶಿಷ್ಟ ಮ್ಯಾನರಿಸಂನಿಂದ ದೇಶ ವಿದೇಶದಲ್ಲಿ ಲಕ್ಷಾಂತರ ಮಂದಿ ಅಭಿಮಾನಿಗಳನ್ನು ಪಡೆದಿರುವ ರಜನಿ, ಅಭಿಮಾನಿಗಳ ಹೃದಯದಲ್ಲಿ ನೆಲೆಸಿದ್ದಾರೆ.

ಕೋವಿಡ್‌ ಕಾರಣ ರಜನಿ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರ ಜೊತೆ ಸರಳವಾಗಿ ಆಚರಿಸಿಕೊಂಡಿದ್ದಾರೆ.

ರಜನಿಯ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಸಿನಿಮಾರಂಗದ ಗಣ್ಯರು, ರಾಜಕೀಯ ನಾಯಕರು, ಉದ್ಯಮಿಗಳು ಮತ್ತು ಅಭಿಮಾನಿಗಳು ರಜನಿಕಾಂತ್‌ ಅವರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಸಂಗೀತ ನಿರ್ದೇಶಕ ಎ.ಆರ್‌ ರೆಹಮಾನ್‌, ನೃತ್ಯ ನಿರ್ದೇಶಕ ರಾಘವ ಲಾರೆನ್ಸ್‌, ನಟಿ ಆದಿತಿ ರಾವ್‌ ಹೈದರಿ ಸೇರಿದಂತೆ ಹಲವರು ಶುಭಾಶಯಗಳನ್ನು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು