ನಟ ಹಾಗೂ ನಿರ್ಮಾಪಕ ರಿಷಬ್ ಶೆಟ್ಟಿ ನಟನೆ ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ ತೆಲುಗು ಭಾಷೆಗೆ ಡಬ್ ಆಗಿದ್ದು, ಆನಂದ್ ಆಡಿಯೋ ತೆಲುಗು ಯುಟ್ಯೂಬ್ ಚಾನೆಲ್ನಲ್ಲಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.

2022ರಲ್ಲಿ ತೆರೆಕಂಡ ಹಾಸ್ಯ ಸಿನಿಮಾ ಹರಿಕಥೆ ಅಲ್ಲ ಗಿರಿಕಥೆ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ದ್ವಿ–ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಾಧಾರಣ ಯಶಸ್ಸು ಕಂಡಿದ್ದ ಈ ಸಿನಿಮಾವು 4 ವರ್ಷಗಳ ಬಳಿಕ ತೆಲುಗು ಭಾಷೆಗೆ ‘ಎ ಫಿಲ್ಮ್ ಬೈ ಗಿರಿ’ ಎಂಬ ಹೆಸರಿನಲ್ಲಿ ಡಬ್ ಆಗಿದೆ. ಇದೇ ಮೇ 8ರಂದು ಚಿತ್ರಮಂದಿರಗಳಲ್ಲಿ ಸಿನಿಮಾವು ಬಿಡುಗಡೆಯಾಗಲಿದೆ.

ಹರಿಕಥೆ ಅಲ್ಲ ಗಿರಿಕಥೆ ಸಿನಿಮಾವನ್ನು ಕರಣ್ ಆನಂದ್ ಹಾಗೂ ಅನಿರುದ್ಧ ಮಹೇಶ್ ಅವರ ನಿರ್ದೇಶನದಲ್ಲಿ ಮೂಡಿಬಂದಿತ್ತು. ಸಿನಿಮಾದ ಕಥೆಯನ್ನು ಗಿರಿ ಕೃಷ್ಣ ಬರೆದಿದ್ದರು. ಸಿನಿಮಾದ ಪ್ರಮುಖ ಪಾತ್ರದಲ್ಲಿ ರಿಷಬ್ ಶೆಟ್ಟಿ, ರಚನಾ ಇಂದರ್, ತಪಸ್ವಿನಿ ಪೂಣಚ್ಚ ಸೇರಿದಂತೆ ಇತರರ ಕಾಣಿಸಿಕೊಂಡಿದ್ದರು.

ಇದೀಗ ಎಂ.ಜಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಅಚ್ಚಿಬಾಬು ಅವರು ಹರಿಕಥೆ ಅಲ್ಲ ಗಿರಿಕಥೆ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಿದ್ದಾರೆ. ಕನ್ನಡದಲ್ಲಿ ಸಂದೇಶ್ ಪ್ರೊಡಕ್ಷನ್ಸ್ ಹಾಗೂ ರಿಷಬ್ ಶೆಟ್ಟಿ ಫಿಲ್ಮ್ಸ್ ಅವರ ಸಹಯೋಗದಲ್ಲಿ ಈ ಸಿನಿಮಾ ನಿರ್ಮಾಣವಾಗಿತ್ತು. ವಾಸುಕಿ ವೈಭವ್ ಸಿನಿಮಾಗೆ ಸಂಗೀತ ನೀಡಿದ್ದರು.

'ಕಾಂತಾರ' ಯಶಸ್ಸಿನ ಬಳಿಕ ರಿಷಬ್ ಐತಿಹಾಸಿಕ, ಪೌರಾಣಿಕ ಪಾತ್ರಗಳನ್ನೇ ಆಯ್ದುಕೊಳ್ಳುತ್ತಿದ್ದಾರೆ. ಬಾಲಿವುಡ್ನ 'ಛತ್ರಪತಿ ಶಿವಾಜಿ' ಚಿತ್ರದಲ್ಲಿಯೂ ರಿಷಬ್ ಕಾಣಿಸಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಯುವ ನಿರ್ದೇಶಕ ಅಶ್ವಿನ್ ಗಂಗರಾಜು ರಿಷಬ್ ಅವರ ಎರಡನೇ ತೆಲುಗು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.