ಹಾಸನ: ಎಲ್ಲ ವರ್ಗದ ಜನರು ಕುಟುಂಬ ಸಮೇತ ನೋಡಬಹುದಾದ ‘ಲೋ ನವೀನಾ’ ಚಿತ್ರ ರಾಜ್ಯದ 130 ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದು, 350ಕ್ಕೂ ಅಧಿಕ ಪ್ರದರ್ಶನ ಕಂಡಿದೆ ಎಂದು ಚಿತ್ರದ ನಾಯಕ ನಟ ಹಾಗೂ ಗಾಯಕ ನವೀನ್ ಸಜ್ಜು ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಚಿತ್ರರಂಗದಲ್ಲಿ ಗಾಯಕನಾಗಿ ಗುರುತಿಸಿಕೊಂಡಿದ್ದ ನನಗೆ ‘ಲೋ ನವೀನಾ’ ಮೂಲಕ ನಾಯಕನಾಗಿ ಬಣ್ಣ ಹಚ್ಚುವ ಅವಕಾಶ ಸಿಕ್ಕಿದೆ. ಮೊದಲ ಪ್ರಯತ್ನಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.

ಧನುರ್ಧಾರಿ ಪವನ್ ನಿರ್ದೇಶನದ ಈ ಚಿತ್ರದಲ್ಲಿ ನಾನು ಸೇರಿದಂತೆ ವರ್ಷಾ ಗಿರಿಧರ್, ರೇಷ್ಮಾ ವಿ.ಗೌಡ, ಅಪೂರ್ವಶ್ರೀ, ಪ್ರಕಾಶ್ ತೂಮಿನಾಡು ಮತ್ತಿತರರು ನಟಿಸಿದ್ದಾರೆ. ಚಿತ್ರದಲ್ಲಿ ಹಳ್ಳಿ ಸೊಗಡು, ಹಾಸ್ಯ ಮಿಶ್ರಿತ ಸಂಭಾಷಣೆ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಚಿತ್ರದಲ್ಲಿ 8 ಹಾಡುಗಳಿದ್ದು, ಬೆಂಗಳೂರು, ಶ್ರೀರಂಗಪಟ್ಟಣ, ಚೆನ್ನೈ, ಕೇರಳದಲ್ಲಿ ಚಿತ್ರೀಕರಣ ನಡೆದಿದೆ ಎಂದು ನವೀನ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-36-935061697

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.