ಮಂಗಳವಾರ, ಸೆಪ್ಟೆಂಬರ್ 21, 2021
27 °C

ರಾಧಿಕಾ ಅಪ್ಟೆಗೆ ಬಹಿಷ್ಕಾರ ಹಾಕಿದ ನೆಟ್ಟಿಗರು; ಏನಿದು ವಿವಾದ?

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್ ನಟಿ ರಾಧಿಕಾ ಅಪ್ಟೆ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಅವರ ಹಸಿಬಿಸಿ ಚಿತ್ರ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದ್ದು, ಆಕೆಯನ್ನು ಬಹಿಷ್ಕರಿಸುವಂತೆ ನೆಟ್ಟಿಗರು ಬೇಡಿಕೆ ಇರಿಸಿದ್ದಾರೆ.

ರಾಧಿಕಾ ಅಭಿನಯದ 'ಪರ್ಚೆಡ್' ಚಿತ್ರದಲ್ಲಿನ ನಗ್ನ ಚಿತ್ರ ವೈರಲ್ ಆಗಿದೆ. ಇದು ನೆಟ್ಟಿಗರ ಕೋಪಕ್ಕೆ ಕಾರಣವಾಗಿದ್ದು, ಭಾರತೀಯ ಸಂಸ್ಕೃತಿಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ.

ಪರ್ಚೆಡ್ ಸಿನಿಮಾದಲ್ಲಿ ನಟಿ ರಾಧಿಕಾ ಅಪ್ಟೆ ಹಾಗೂ ನಟ ಅದಿಲ್ ಹುಸೇನ್ ನಡುವಣ 'ಬೋಲ್ಡ್ ಸೀನ್' ಹೆಚ್ಚು ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: 

ಆದರೆ ಈ ವಿವಾದಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಅಪ್ಟೆ ತಕ್ಷಣಕ್ಕೆ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ. ಆದರೆ ಈ ಹಿಂದೆ ಬೋಲ್ಡ್ ಸಿನಿಮಾಗಳಲ್ಲಿ ನಟಿಸುವುದು ಹೆಚ್ಚು ಆರಾಮದಾಯಕ ಎಂದು ಹೇಳಿದ್ದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು