ಶುಕ್ರವಾರ, ನವೆಂಬರ್ 27, 2020
21 °C

ಹಿಂದಿ ಕಿರುತೆರೆ ನಟಿ ಲೀನಾ ಆಚಾರ್ಯ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶೇಠ್ ಜೀ, ಆಪ್ ಕೇ ಆ ಜಾನೇ ಸೇ, ಮೇರಿ ಹಾನಿಕಾಕರ್ ಬೀವೀ ಹಾಗೂ ಕ್ಲಾಸ್ ಆಫ್ 2020 ಮುಂತಾದ ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದ ಲೀನಾ ಆಚಾರ್ಯ ಕಿಡ್ನಿ ವೈಫಲ್ಯದಿಂದ ನಿಧನ ಹೊಂದಿದ್ದಾರೆ. ಬಾಲಿವುಡ್‌ನ ಹಿಚ್ಕಿ ಸಿನಿಮಾದಲ್ಲೂ ಆಕೆ ನಟಿಸಿದ್ದರು. 

‘ಲೀನಾ ಕಳೆದ ಒಂದೂವರೆ ವರ್ಷದಿಂದ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರ ತಾಯಿ ಅವರಿಗೆ ಮೂತ್ರಪಿಂಡ ದಾನ ಮಾಡಿದ್ದರು. ಆದರೂ ಆಕೆ ಬದುಕಲಿಲ್ಲ’ ಎಂದು ಟೈಮ್ಸ್ ಆಫ್ ಇಂಡಿಯಾಗೆ ಹೇಳಿದ್ದಾರೆ ಶೇಠ್‌ ಜೀ ಸಹನಟ ವರ್ಷಿಪ್‌ ಖನ್ನಾ.

ಕ್ಲಾಸ್ ಆಫ್ 2020 ನಟ ರೋಹನ್ ಮೆಹ್ರಾ ಲೀನಾ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಅಲ್ಲದೇ ಟ್ವಿಟ್ಟರ್ ಖಾತೆಯಲ್ಲಿ ‘ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಲೀನಾ ಮ್ಯಾಮ್‌, ಕಳೆದ ವರ್ಷ ಈ ಸಮಯದಲ್ಲಿ ನಾವು ಕ್ಲಾಸ್ ಆಫ್ 2020 ಶೂಟಿಂನ್‌ನಲ್ಲಿದ್ದೆವು. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ನಟ ಅಭಿಷೇಕ್ ಭಾಲೇರಾವ್ ಕೂಡ ಲೀನಾ ಹಾಗೂ ತಮ್ಮ ನಡುವೆ ನಡೆದ ವಾಟ್ಸ್‌ಆ್ಯಪ್‌ ಸಂದೇಶದ ಸ್ಕ್ರೀನ್ ಶಾಟ್ ಹಂಚಿಕೊಂಡು ದುಃಖ ತೋಡಿಕೊಂಡಿದ್ದಾರೆ.

 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು