‘ಲಕ್ಷ್ಮಣ’ ಖ್ಯಾತಿಯ ನಟ ಅನೂಪ್ ರೇವಣ್ಣ ನಟಿಸಿರುವ ಹೈಡ್ ಆ್ಯಂಡ್ ಸೀಕ್ ಚಿತ್ರವು ಸದ್ದಿಲ್ಲದೆ ಚಿತ್ರೀಕರಣ ಪೂರ್ಣಗೊಳಿಸಿ ರಿಲೀಸ್‌ಗೆ ಸಜ್ಜಾಗಿದೆ. ಪುನೀತ್ ನಾಗರಾಜು ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಅನೂಪ್ ಕಿಡ್ನಾಪರ್ ಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಚಿತ್ರದ ಫಸ್ಟ್ ಲುಕ್ ಅನಾವರಣಗೊಳಿಸಿದರು.
‘ಯುವತಿಯ ಅಪಹರಣದ ಸುತ್ತ ನಡೆಯುವ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ಬೆಂಗಳೂರು, ಮಾಗಡಿ, ಚಿಕ್ಕಮಗಳೂರು ಸುತ್ತಮುತ್ತ 30 ದಿನಗಳ ಕಾಲ ಚಿತ್ರೀಕರಿಸಿದ್ದೇವೆ. ಚಿತ್ರದಲ್ಲಿ ನಾಯಕನೇ ಕಿಡ್ನಾಪರ್ ಆಗಿದ್ದು, ಧನ್ಯಾ ರಾಮ್‌ಕುಮಾರ್ ಒಬ್ಬ ಉದ್ಯಮಿಯ ಮಗಳಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರಿವರ್ಸ್ ಸ್ಕ್ರೀನ್ ಪ್ಲೇ ಮೂಲಕ ಕಥೆ ಹೇಳಲು ಪ್ರಯತ್ನಿಸಿದ್ದೇನೆ’ ಎನ್ನುತ್ತಾರೆ ಪುನೀತ್.
‘ನನ್ನ ಹಿಂದಿನ ಚಿತ್ರದ ಪಾತ್ರಕ್ಕೂ ಇದಕ್ಕೂ ವ್ಯತ್ಯಾಸವಿದೆ. ಜಾಸ್ತಿ ಮಾತಾಡದ, ಯಾವುದೇ ಭಾವನೆಗಳನ್ನು ವ್ಯಕ್ತಪಡಿಸದ ವ್ಯಕ್ತಿ ಈತ. ನಾನಿಲ್ಲಿ ಹೀರೊ, ವಿಲನ್ ಎರಡೂ ರೀತಿಯ ಪಾತ್ರ ಮಾಡಿದ್ದೇನೆ’ ಎಂದರು ಅನೂಪ್.
‘ಚಿತ್ರದ ಸ್ಕ್ರಿಪ್ಟ್ ಕೇಳಿದಾಗಲೇ ನನಗೆ ಕಥೆ ಇಷ್ಟವಾಯಿತು. ಮಿಸ್ಟ್ರಿ ಥ್ರಿಲ್ಲರ್ ಜಾನರ್‌ನ ಈ ಚಿತ್ರವನ್ನು ನನ್ನ ಎರಡನೇ ಚಿತ್ರವಾಗಿ ಆಯ್ಕೆ ಮಾಡಿಕೊಂಡೆ. ಹಲವು ತಿರುವುಗಳು ಚಿತ್ರಕಥೆಯಲ್ಲಿದೆ’ ಎನ್ನುತ್ತಾರೆ ಧನ್ಯಾ. ಮೈತ್ರಿ ಜಗ್ಗಿ, ರಕ್ಷಾ ಉಮೇಶ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸುನೇರಿ ಆರ್ಟ್ ಕ್ರಿಯೇಶನ್ಸ್ ಮೂಲಕ ಪುನೀತ್ ನಾಗರಾಜು, ವಸಂತ್ ರಾವ್ ಎಂ. ಕುಲಕರ್ಣಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಿಜೋ ಪಿ.ಜಾನ್ ಅವರ ಛಾಯಾಗ್ರಹಣ, ಸ್ಯಾಂಡಿ ಅದಾನ್ಕಿ ಅವರ ಸಂಗೀತ ನಿರ್ದೇಶನ, ಮಧು ತುಂಬಕೆರೆ ಅವರ ಸಂಕಲನ ಚಿತ್ರಕ್ಕಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.