ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದಲ್ಲಿ 'Article 370' ಸಿನಿಮಾ ತೆರಿಗೆ ಮುಕ್ತ

Published 8 ಮಾರ್ಚ್ 2024, 3:06 IST
Last Updated 8 ಮಾರ್ಚ್ 2024, 3:06 IST
ಅಕ್ಷರ ಗಾತ್ರ

ಭೋಪಾಲ್: ಇತ್ತೀಚೆಗೆ ಬಿಡುಗಡೆಯಾದ 'ಆರ್ಟಿಕಲ್ 370' ಸಿನಿಮಾಗೆ ಮಧ್ಯಪ್ರದೇಶ ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ.

ರಾಜ್ಯದ ನಾಗರಿಕರು ಆರ್ಟಿಕಲ್ 370ರ ಕಹಿ ಸತ್ಯವನ್ನು ತಿಳಿದುಕೊಳ್ಳಲು, ನಾವು ರಾಜ್ಯದದಲ್ಲಿ ಆರ್ಟಿಕಲ್ 370 ಚಿತ್ರವನ್ನು ತೆರಿಗೆ ಮುಕ್ತಗೊಳಿಸಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಅಪಾರ ಅಭಿವೃದ್ಧಿಗೆ ಕಾರಣೀಭೂತರಾಗಿದ್ದಾರೆ ಎಂದು ಯಾದವ್ ಪ್ರತಿಪಾದಿಸಿದ್ದಾರೆ.

ಈ ಚಿತ್ರವು ಜಮ್ಮು ಮತ್ತು ಕಾಶ್ಮೀರದ ಹಿಂದಿನ ಮತ್ತು ಪ್ರಸ್ತುತ ಸ್ಥಿತಿಗಳನ್ನು ಹತ್ತಿರದಿಂದ ಅರ್ಥಮಾಡಿಕೊಳ್ಳಲು ಅವಕಾಶವನ್ನು ನೀಡುತ್ತದೆ ಎಂದು ಸಿಎಂ ಹೇಳಿದ್ದಾರೆ.

ಯಾಮಿ ಗೌತಮ್ ನಟಿಸಿರುವ ಆರ್ಟಿಕಲ್ 370 ಸಿನಿಮಾ ಕಾಶ್ಮೀರದಲ್ಲಿನ ಭಯೋತ್ಪಾದನೆ ಮತ್ತು ಅದರ ವಿರುದ್ಧ ಸರ್ಕಾರದ ಹೋರಾಟದ ಸುತ್ತ ಕೇಂದ್ರೀಕರಿಸುತ್ತದೆ. ಚಿತ್ರವು ಫೆಬ್ರುವರಿ 23 ರಂದು ರಾಷ್ಟ್ರವ್ಯಾಪಿ ಬಿಡುಗಡೆಯಾಗಿದೆ.

ನರೇಂದ್ರ ಮೋದಿ ಸರ್ಕಾರ 2019ರ ಆಗಸ್ಟ್‌ 5 ರಂದು 370ನೇ ವಿಧಿಯನ್ನು ರದ್ದುಗೊಳಿಸಿತು. ಇದರಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಹಿಂದೆ ನೀಡಲಾದ ವಿಶೇಷ ಸ್ಥಾನಮಾನ ಕೊನೆಗೊಂಡಿತು. ಬಳಿಕ ಇದನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT