ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಬಾ ಆಜಾದ್ ಜತೆ ಮತ್ತೆ ಕಾಣಿಸಿಕೊಂಡ ಬಾಲಿವುಡ್ ನಟ ಹೃತಿಕ್ ರೋಷನ್: ವಿಡಿಯೊ ವೈರಲ್

Last Updated 5 ಏಪ್ರಿಲ್ 2022, 12:32 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟ ಹೃತಿಕ್​ ರೋಷನ್ ಅವರು ಯುವ ನಟಿ ಸಬಾ ಆಜಾದ್ ಅವರೊಂದಿಗೆ ಮತ್ತೆ ಜತೆಯಾಗಿ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ.

ಈ ಜೋಡಿ ಇಂದು (ಮಂಗಳವಾರ) ಮುಂಬೈ ಏರ್‌ಪೋರ್ಟ್‌ನಲ್ಲಿ ಕೈ–ಕೈ ಹಿಡಿದುಕೊಂಡು ಒಟ್ಟಿಗೆ ಹೊರಬರುತ್ತಿರುವ, ವಿಡಿಯೊ ಮತ್ತುಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಹೃತಿಕ್ –ಸಬಾ ಇತ್ತೀಚಿಗೆ ರೆಸ್ಟೋರೆಂಟ್‌ನಿಂದ ಒಟ್ಟಿಗೆ ಹೊರಬರುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಜತೆಗೆ, ಹೃತಿಕ್ ರೋಶನ್ ಫ್ಯಾಮಿಲಿ ಪಾರ್ಟಿಯಲ್ಲೂ ಸಬಾ ಕಾಣಿಸಿಕೊಂಡಿದ್ದರು.

ಹೃತಿಕ್​ ರೋಷನ್ ಅವರು ಸಬಾ ಆಜಾದ್ ಜತೆಗೆ ಡೇಟಿಂಗ್​ ಮಾಡುತ್ತಿದ್ದಾರೆ ಎಂಬ ವದಂತಿ ಬಾಲಿವುಡ್‌ ಅಂಗಳದಲ್ಲಿ ಹರಿದಾಡುತ್ತಿದೆ. ಆದರೆ, ಈ ಬಗ್ಗೆ ಅವರು ಎಲ್ಲಿಯೂ ಅಧಿಕೃತವಾಗಿ ಹೇಳಿಕೊಂಡಿಲ್ಲ.

2000ರಲ್ಲಿ ಹೃತಿಕ್​ ರೋಷನ್​ ಹಾಗೂ ಸುಸಾನೆ ಖಾನ್ ಮದುವೆ ಆಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ನಂತರ ಈ ಜೋಡಿ 2014ರಲ್ಲಿ ವಿಚ್ಛೇದನ ಪಡೆದಿದ್ದರು.ಇದೀಗ ಹೃತಿಕ್​ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ವಿಚ್ಛೇದನ ಪಡೆದ ಬಳಿಕ ಸುಸಾನೆ ಖಾನ್ ಅವರೂ ಕೂಡ ಹಿಂದಿ ಕಿರುತೆರೆ ನಟ ಅರ್ಸ್ಲಾನ್ ಗೋನಿ ಅವರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬವದಂತಿ ಬಾಲಿವುಡ್‌ ಅಂಗಳದಲ್ಲಿ ಹರಿದಾಡುತ್ತಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT