ಭಾನುವಾರ, ಸೆಪ್ಟೆಂಬರ್ 19, 2021
29 °C

ಹಾಲಿವುಡ್‌ ನಟ ಟಾಮ್‌ ಹಂಕ್ಸ್‌, ಪತ್ನಿ ರೀಟಾಗೆ ಕೊರೊನಾ ವೈರಸ್‌ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಹಾಲಿವುಡ್‌ ನಟ ಟಾಮ್‌ ಹಂಕ್ಸ್‌, ಇವರ ಪತ್ನಿ ರೀಟಾಗೆ ಮಾರಕ ಕೊರೊನಾ ವೈರಸ್‌ ಸೋಂಕು ಹರಡಿದ್ದು ದಂಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನನಗೂ, ರಿಟಾಗೂ ಕೋವಿಡ್‌–19 ಸೋಂಕು ಹರಡಿರುವುದು ದೃಢಪಟ್ಟಿದ್ದು ಆಸ್ಪತ್ರೆಯೊಂದರ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇವೆ ಎಂದು ಹಂಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಹಂಕ್ಸ್‌ ದಂಪತಿಗೆ ಕೊರೊನಾ ಸೋಂಕು ಹರಡಿದೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ವರದಿ ಮಾಡಿವೆ. 

ಹಂಕ್ಸ್‌ ದಂಪತಿ ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ಇದ್ದಾರೆ. ಇನ್ನು ಹೆಸರಿಡದ ಸಿನಿಮಾದಲ್ಲಿ ನಟಿಸುತ್ತಿರುವ ಹಂಕ್ಸ್‌ ಈ ಚಿತ್ರದ ಶೂಟಿಂಗ್‌ಗಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಈ ವೇಳೆ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ.

ನಾವು ಸಿನಿಮಾ ಶೂಟಿಂಗ್‌ಗಾಗಿ ಆಸ್ಟ್ರೇಲಿಯಾಕ್ಕೆ ಬಂದಿದ್ದೇವೆ. ನನಗೂ ಮತ್ತು ರೀಟಾಗೂ ಮೈಕೈ ನೋವು, ಶೀತ, ನೆಗಡಿ, ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ವೈದ್ಯರನ್ನು ಸಂಪರ್ಕಿಸಿದೆವು. ಅವರು ನಮ್ಮ ರಕ್ತ ಮತ್ತು ಕಫದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದರು. ವರದಿಯಲ್ಲಿ ಕೋವಿಡ್‌–19 ಪಾಸಿಟಿವ್‌ ಬಂದಿದೆ ಎಂದು ತಿಳಿಸಿದ್ದಾರೆ.

ಮುಂದೆ ವೈದ್ಯರು ಸಲಹೆ ಸೂಚನೆಗಳನ್ನು ಪಾಲಿಸುತ್ತ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಮತ್ತೆ ನಿಮಗೆ ನಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡುವೆ, ನಿಮ್ಮ ಆರೋಗ್ಯದ ಬಗ್ಗೆ ಗಮನ ಕೊಡಿ ಎಂದು ಅಭಿಮಾನಿಗಳಿಗೆ ಹೇಳಿದ್ದಾರೆ. ಕಸದ ಬುಟ್ಟಿಯಲ್ಲಿ ಶಸ್ತ್ರಚಿಕಿತ್ಸೆಯ ಕೈಗವಸನ್ನು ಎಸೆದಿರುವ ಚಿತ್ರ ಹಾಕಿ ಪೋಸ್ಟ್‌ ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು