ಬುಧವಾರ, ಮೇ 18, 2022
25 °C
ಸಿನಿಮಾ, ಕ್ರಿಕೆಟ್‌ ಮನೋರಂಜನೆಯ ಸಮ್ಮಿಲನ

ಹೊಂಬಾಳೆ ಫಿಲ್ಮ್ಸ್‌– ಆರ್‌ಸಿಬಿ ಸಹಭಾಗಿತ್ವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಜೊತೆ ಸಹಭಾಗಿತ್ವಕ್ಕೆ ಸಹಿ ಮಾಡಿದೆ.

ಈ ಸಹಯೋಗವು ಭರಪೂರ ಮನೋರಂಜನೆ, ಗ್ಲಾಮರ್, ಚಲನಚಿತ್ರ, ಕ್ರೀಡೆಗಳ ಅದ್ಭುತ ಸಂಗಮವನ್ನುಂಟು ಮಾಡಲಿದೆ. 

ಹೊಂಬಾಳೆ ಫಿಲ್ಮ್ಸ್‌ನ ಮುಖ್ಯಸ್ಥ ವಿಜಯ್‌ ಕಿರಗಂದೂರು ಮಾತನಾಡಿ, ‘ಸಿನಿಮಾ ನನ್ನ ಪ್ಯಾಷನ್. ಕ್ರಿಕೆಟ್ ಪ್ರೇಮಿಯಾಗಿ ಮತ್ತು ಕನ್ನಡಿಗನಾಗಿ ಕ್ರಿಕೆಟ್ ನನ್ನನ್ನು ಯಾವಾಗಲೂ ಆಕರ್ಷಿಸುತ್ತಿದೆ. ಹೊಂಬಾಳೆ ಫಿಲ್ಮ್ಸ್ ಮತ್ತು ಆರ್‌ಸಿಬಿ ಎರಡಕ್ಕೂ ನಮ್ಮ ಬೆಂಗಳೂರೇ ತವರಾಗಿರುವುದರಿಂದ ಈ ಪಾಲುದಾರಿಕೆ ಸಹಜವಾಗಿದೆ. ಕೆಲಕಾಲದಿಂದ ಸ್ವಲ್ಪ ಸಮಯದಿಂದ ಈ ಸಹಯೋಗದಲ್ಲಿ ಕೆಲಸ ಮಾಡುವ ಬಗ್ಗೆ ನಮ್ಮಲ್ಲಿ ಹೊಸ ಉತ್ಸಾಹ ಮೂಡಿದೆ. ಈ ವರ್ಷ (2022) ನಮ್ಮೆಲ್ಲರಿಗೂ ರಾಯಲ್‌ ಆಗಿರಲಿದೆ. ಕ್ರೀಡೆ ಮತ್ತು ಮನರಂಜನೆ ವಿಚಾರದಲ್ಲಿ ಕ್ಷಣಮಾತ್ರದಲ್ಲಿ ಬದಲಾಗುವ ಅಭಿಮಾನಿಗಳ ನಡವಳಿಕೆ ಮತ್ತು ಆದ್ಯತೆಗಳನ್ನು ಅರಿತು ಅವರ ನಾಡಿಮಿಡಿತಕ್ಕೆ ಬಲ ನೀಡುವ ಜತೆ ಹೊಸ ಮನರಂಜನಾ ಮಾರ್ಗಗಳಿಗಾಗಿ ಹೆಚ್ಚುತ್ತಿರುವ ಬೇಡಿಕೆಗಳನ್ನು ಈಡೇರಿಸುವ ಮೂಲಕ ಈ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಪ್ರಸರಣ ಉದ್ಯಮಕ್ಕೆ ಕೊಡುಗೆ ನೀಡುವ ಗುರಿ ಹೊಂದಿದ್ದೇವೆ’ ಎಂದಿದ್ದಾರೆ. 

ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಅವರಂತಹ ದಿಗ್ಗಜ ಆಟಗಾರರನ್ನೊಳಗೊಂಡಿರುವುದರಿಂದ ಈ ಸಹಯೋಗ ಅತ್ಯಂತ ರೋಮಾಂಚನಕಾರಿಯಾಗಿರಲಿದ್ದು ಅಭಿಮಾನಿಗಳಿಗೆ ಮರೆಯಲಾಗದ ಅನುಭವ ನೀಡಲಿದೆ. ಎರಡೂ ಕಂಪನಿಗಳ ಸಹಯೋಗದ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಕೆ.ಜಿ.ಎಫ್‌. –2 ಚಿತ್ರದ ಟೀಸರ್‌ ಹಾಗೂ ಕ್ರಿಕೆಟಿಗರ ಆ್ಯಕ್ಷನ್‌ ದೃಶ್ಯಗಳನ್ನು ಹೊಂದಿಸಿ ಒಂದು ವಿಡಿಯೋವನ್ನು ಬಿಡುಗಡೆ ಮಾಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು