ಶನಿವಾರ, ಸೆಪ್ಟೆಂಬರ್ 18, 2021
30 °C

ಗಾಯಕ ಹನಿ ಸಿಂಗ್‌ ವಿರುದ್ಧ ಕೌಟುಂಬಿಕ ದೌರ್ಜನ್ಯ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿವುಡ್‌ ಗಾಯಕ ಯೋ, ಯೋ ಹನಿ ಸಿಂಗ್‌ ವಿರುದ್ಧ ಅವರ ಪತ್ನಿ ಶಾಲಿನಿ ತಲ್ವಾರ್‌ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ  ದೂರು ದಾಖಲಿಸಿದ್ದಾರೆ.

ದೆಹಲಿಯ ತಿಸ್ ಹಜಾರಿ ನ್ಯಾಯಾಲಯದಲ್ಲಿ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಶಾಲಿನಿ ಪರ ವಕೀಲರಾದ ಸಂದೀಪ್‌ ಕಪೂರ್ ತಿಳಿಸಿದ್ದಾರೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಹನಿ ಸಿಂಗ್‌ ಅವರಿಗೆ ಆಗಸ್ಟ್‌ 28ರ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದ್ದಾರೆ.

ಶಾಲಿನಿ ಮತ್ತು ಹನಿ ಸಿಂಗ್ ಅವರ ಜಂಟಿ ಒಡೆತನದಲ್ಲಿರುವ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ಪ್ರಕ್ರಿಯೆ ಮಾಡುವಂತಿಲ್ಲ ಎಂದು ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ.

2014ರ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಪತ್ನಿ ಶಾಲಿನಿಯನ್ನು ಹನಿ ಸಿಂಗ್‌ ಪರಿಚಯಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು