ರಾಜಕೀಯ ಥ್ರಿಲ್ಲರ್ ಕಥಾಹಂದರ: ವ್ಯವಸ್ಥೆ ಬದಲಾವಣೆಯ ‘ಹೋಪ್’

ರಾಜಕೀಯ ಥ್ರಿಲ್ಲರ್ ಕಥಾಹಂದರದ ಚಿತ್ರ ‘ಹೋಪ್’ ಬಹುತೇಕ ಮುಕ್ತಾಯಗೊಂಡಿದ್ದು, ಇತ್ತೀಚೆಗಷ್ಟೇ ಟ್ರೇಲರ್‌ನೊಂದಿಗೆ ಸದ್ದು ಮಾಡಿದೆ.
ಸರ್ಕಾರಿ ವ್ಯವಸ್ಥೆಯೊಳಗಿನ ಭ್ರಷ್ಟಾಚಾರದ ವಿರುದ್ಧ ಪ್ರಬಲ ಧ್ವನಿ ಎತ್ತಿದ ಚಿತ್ರವಿದು. ಕೊನೆಗೂ ಒಂದು ಹೊಸ ಭರವಸೆಯ ಆಶಾಕಿರಣ ಮೂಡಿಸುವ ಆಶಯದೊಂದಿಗೆ ಕತೆ ಕೊನೆಗೊಳ್ಳುತ್ತದೆ ಎಂದಿದೆ ಚಿತ್ರತಂಡ. ಗೋಲ್ಡಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ವರ್ಷಾ ಸಂಜೀವ್ ಈ ಚಿತ್ರ ನಿರ್ಮಿಸಿದ್ದಾರೆ. ಶ್ವೇತಾ ಶ್ರೀವಾಸ್ತವ್, ಸುಮಲತಾ ಅಂಬರೀಶ್, ಪ್ರಕಾಶ್ ಬೆಳವಾಡಿ, ಗೋಪಾಲಕೃಷ್ಣ ದೇಶಪಾಂಡೆ ತಾರಾಗಣದಲ್ಲಿದ್ದಾರೆ.
ಚಿತ್ರ ಬಿಡುಗಡೆಯ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.