ಮಂಗಳವಾರ, ಆಗಸ್ಟ್ 9, 2022
23 °C

'ಹೋಪ್' ಸಿನಿಮಾ ಮೇಲೆ ಹೆಚ್ಚಾಯ್ತು ನಿರೀಕ್ಷೆ: ಟ್ರೈಲರ್ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂದನವನದಲ್ಲಿ 'ಹೋಪ್' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

ಪೋಸ್ಟರ್‌ಗಳು, ಟೀಸರ್‌ಗಳ ಮೂಲಕ ಸಿನಿಮಾ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿದೆ. ಟ್ರೈಲರ್‌ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಕಂಡಿದೆ.

ಸಿನಿಮಾರಂಗದಿಂದ ಕೆಲವು ವರ್ಷಗಳ ಕಾಲ ಗ್ಯಾಪ್ ತೆಗೆದುಕೊಂಡಿದ್ದ ಶ್ವೇತಾ ಶ್ರೀವಾಸ್ತವ್ ಹೋಪ್ ಸಿನಿಮಾ ಮೂಲಕ ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಸಿನಿಮಾದಲ್ಲಿ ಅವರು ಕೆಎಎಸ್ ಅಧಿಕಾರಿಯಾಗಿ ನಟಿಸಿದ್ದಾರೆ. ರಾಜಕೀಯ ಒತ್ತಡದಿಂದ ವರ್ಗಾವಣೆ ಹೇಗೆಲ್ಲಾ ನಡೆಯುತ್ತಿದೆ ಎಂಬುದೇ ಸಿನಿಮಾದ ಸಾರಾಂಶ.

ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್, ಹೋಪ್ ಸಿನಿಮಾಗೆ ಕಥೆ ಬರೆದು ನಿರ್ಮಾಣ ಮಾಡಿದ್ದಾರೆ. ಈ ಹಿಂದೆ 'ಜ್ವಲಂತ' ಸಿನಿಮಾ ನಿರ್ದೇಶಿಸಿದ ಅಂಬರೀಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಎಸ್.ಹಲ್ಲೇಶ್ ಕ್ಯಾಮರಾ, ರಿತ್ವಿಕ್ ಮುರಳೀಧರ್ ಸಂಗೀತ ನೀಡಿದ್ದಾರೆ.

ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ, ಗೋಪಾಲ ಪಾಂಡೆ, ಪ್ರಕಾಶ್ ಬೆಳವಾಡಿ, ಸಿರಿ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜುಲೈ 8ರಂದು ಬಿಡುಗಡೆ ಆಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು