ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಫೈಟರ್' ಜೆಟ್ ಪೈಲಟ್‌ಗಳಾಗಿ ಹೃತಿಕ್‌, ದೀಪಿಕಾ

Published 15 ಆಗಸ್ಟ್ 2023, 12:47 IST
Last Updated 15 ಆಗಸ್ಟ್ 2023, 12:47 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ನ ಬಹುನಿರೀಕ್ಷಿತ ‘ಫೈಟರ್‌’ ಸಿನಿಮಾದ ಫೋಸ್ಟರ್‌ ವಿಡಿಯೊ ಅನ್ನು ಚಿತ್ರತಂಡ ಸ್ವಾತಂತ್ರ್ಯೋತ್ಸವದ ದಿನದಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಚಿತ್ರವು 2024ರ ಜನವರಿ 25ರಂದು ಬೆಳ್ಳಿ ತೆರೆಯಲ್ಲಿ ಬಿಡುಗಡೆಯಾಗಲಿದೆ.

ಈ ಚಿತ್ರದಲ್ಲಿ ಭಾರತೀಯ ವಾಯುಪಡೆಯ(ಐಎಎಫ್) ಅಧಿಕಾರಿಗಳಾಗಿ ಬಾಲಿವುಡ್‌ನ ನಟ ಹೃತಿಕ್‌ ರೋಷನ್‌, ಅನಿಲ್‌ ಕಪೂರ್‌ ಹಾಗೂ ನಟಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ.

ಫೋಸ್ಟರ್‌ ವಿಡಿಯೊ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಹೃತಿಕ್‌ ರೋಷನ್‌, ವಂದೇ ಮಾತರಂ. ಗಣರಾಜ್ಯೋತ್ಸವದ ಅಂಗವಾಗಿ ಫೈಟರ್‌ 2024ರ ಜನವರಿ 25ರಂದು ವಿಶ್ವದಾದ್ಯಂತ ತೆರೆ ಮೇಲೆ ಕಾಣಿಸಿಕೊಳ್ಳಲಿದೆ ಎಂದು ಬರೆದುಕೊಂಡಿದ್ದಾರೆ.

ಸ್ವಾತಂತ್ರ್ಯ ದಿನದ ಶುಭಾಶಯ ಕೋರಿರುವ ನಟಿ ದೀಪಿಕಾ ಪಡುಕೋಣೆ ಹಾಗೂ ಬಾಲಿವುಡ್‌ ನಟ ಅನಿಲ್‌ ಕಪೂರ್‌ ಅವರೂ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟರ್‌ ವಿಡಿಯೊ ಹಂಚಿಕೊಂಡಿದ್ದಾರೆ.

ನಿರ್ದೇಶಕ ಸಿದ್ದಾರ್ಥ್‌ ಆನಂದ್‌ ಅವರು ’ಫೈಟರ್’ ಸಿನಿಮಾ ಮೂಲಕ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯ, ದೇಶಭಕ್ತಿ ಮತ್ತು ತ್ಯಾಗದ ಕಥೆ ಹೇಳಲಿದ್ದಾರೆ.

ಈ ಚಿತ್ರವನ್ನು ವಯಾಕಾಮ್ 18 ಸ್ಟುಡಿಯೋಸ್ ಮತ್ತು ಮಾರ್ಫ್ಲಿಕ್ಸ್ ಪಿಕ್ಚರ್ಸ್ ನಿರ್ಮಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT