ಭಾನುವಾರ, ಸೆಪ್ಟೆಂಬರ್ 25, 2022
29 °C

ಹೃತಿಕ್‌–ಸೈಫ್‌ ಮೋಡಿ: 100ಕ್ಕೂ ಹೆಚ್ಚು ದೇಶಗಳಲ್ಲಿ ‘ವಿಕ್ರಮ್ ವೇದಾ’ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೃತಿಕ್ ರೋಷನ್ ಮತ್ತು ಸೈಫ್ ಅಲಿ ಖಾನ್ ಅಭಿನಯದ ‘ವಿಕ್ರಮ್ ವೇದಾ’ ಚಿತ್ರ 100ಕ್ಕೂ ಹೆಚ್ಚು ದೇಶಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಉತ್ತರ ಅಮೆರಿಕ, ಬ್ರಿಟನ್‌, ಮಧ್ಯಪ್ರಾಚ್ಯ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಜಪಾನ್, ರಷ್ಯಾ, ಪನಾಮ, ಪೆರು ದೇಶಗಳಲ್ಲಿ ಬಿಡುಗಡೆಯಾಗಲಿದೆ. ಹಾಗೇ ಆಫ್ರಿಕಾ ಖಂಡದಲ್ಲಿ 25 ದೇಶಗಳು, ಲ್ಯಾಟಿನ್ ಅಮೆರಿಕದ 27 ರಾಷ್ಟ್ರಗಳು ಮತ್ತು ಯುರೋಪ್‌ನ 22 ದೇಶಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. 

ಅರಬ್‌ ದೇಶಗಳು ಸೇರಿದಂತೆ ಒಟ್ಟು ನೂರು ದೇಶಗಳಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚಿತ್ರತಂಡ ತಿಳಿಸಿದೆ. ಇದುವರೆಗೂ ಬಾಲಿವುಡ್‌ ಚಿತ್ರಗಳು ಬಿಡುಗಡೆಯಾಗದಿರುವ ದೇಶಗಳಲ್ಲೂ ಚಿತ್ರ ತೆರೆ ಕಾಣಲಿದೆ.

ಕ್ರೈಮ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ, ಮೈನವಿರೇಳಿಸುವ ಆ್ಯಕ್ಷನ್‌ ಸೀಕ್ವೆನ್ಸ್‌ಗಳು, ಹೊಡೆದಾಟದ ದೃಶ್ಯಗಳಿರುವ ಈ ಸಿನಿಮಾ ಬಾಲಿವುಡ್‌ನಲ್ಲಿ ನಿರೀಕ್ಷೆ ಮೂಡಿಸಿದೆ. ಸ್ಟಾರ್‌ ನಟರಾದ ಸೈಫ್ ಹಾಗೂ ಹೃತಿಕ್ ಮುಖಾಮುಖಿಯಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲವನ್ನು ಹೆಚ್ಚಿಸಿದೆ. ಈಗಾಗಲೇ ಚಿತ್ರದ ಮೂರು ನಿಮಿಷಗಳ ಟ್ರೇಲರ್‌ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

‘ವಿಕ್ರಮ್‌ ವೇದ’ ತಮಿಳಿನ ರಿಮೇಕ್‌ ಚಿತ್ರ. ಮೂಲ ಚಿತ್ರವನ್ನು ನಿರ್ದೇಶಿಸಿದ ಪುಷ್ಕರ್ ಮತ್ತು ಗಾಯತ್ರಿ ಅವರೇ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸೆಪ್ಟೆಂಬರ್ 30ರಂದು ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಹೃತಿಕ್ ರೋಷನ್ ವೇದ ಪಾತ್ರದಲ್ಲಿ, ಸೈಫ್ ಅಲಿ ಖಾನ್ ವಿಕ್ರಮ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಭೂಷಣ್ ಕುಮಾರ್, ಎಸ್.ಶಶಿಕಾಂತ್ ಚಿತ್ರದ ನಿರ್ಮಾಪಕರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು