ಸೋಮವಾರ, ಜನವರಿ 17, 2022
21 °C

Hrithik Roshan Birthday: 'ವಿಕ್ರಂ ವೇದಾ' ಸಿನಿಮಾದ ಪೋಸ್ಟರ್‌ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ನಟ ಹೃತಿಕ್‌ ರೋಶನ್‌  48ನೇ ಜನ್ಮದಿನದ ಸಂಭ್ರಮದಲ್ಲಿದ್ದು ಅವರು ನಟಿಸಿರುವ  ’ವಿಕ್ರಂ ವೇದಾ’ ಸಿನಿಮಾದ ಪೋಸ್ಟರ್‌ ಬಿಡುಗಡೆಯಾಗಿದೆ.

ಹೃತಿಕ್‌ ಹುಟ್ಟುಹಬ್ಬಕ್ಕೆ ಬಾಲಿವುಡ್‌ ಗಣ್ಯರು ಹಾಗೂ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಶುಭಾಶಯ ಹೇಳುತ್ತಿದ್ದಾರೆ.

ಹೃತಿಕ್‌ ರೋಶನ್‌ ಇರುವ ಪೋಸ್ಟರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ರಗಡ್‌ ಲುಕ್‌ನಲ್ಲಿ ಹೃತಿಕ್‌ ಕಾಣುತ್ತಾರೆ. ಅವರ ಅಭಿಮಾನಿಗಳು ಪೋಸ್ಟರ್‌ ಮೆಚ್ಚಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ  ಶೇರ್‌ ಮಾಡುತ್ತಿದ್ದಾರೆ.

 ’ವಿಕ್ರಂ ವೇದಾ' ಸಿನಿಮಾದ ಶೂಟಿಂಗ್‌ ನಡೆಯುತ್ತಿದ್ದು ಸದ್ಯ ಸೈಫ್‌ ಆಲಿಖಾನ್‌ ಭಾಗದ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗುತ್ತಿದೆ. ಪುಷ್ಕರ್‌ ಗಾಯತ್ರಿ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ ’ವಿಕ್ರಂ ವೇದಾ’ ಸಿನಿಮಾ ಬಿಡುಗಡೆಯಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು