‘ಮಜಾ ಭಾರತ’, ‘ಗಿಚ್ಚಿ ಗಿಲಿಗಿಲಿ’, ‘ಭರ್ಜರಿ ಬ್ಯಾಚುಲರ್ಸ್’ ಖ್ಯಾತಿಯ ಹುಲಿ ಕಾರ್ತಿಕ್ ‘ಡೆವಿಲ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ಶ್ರೀ ಜೈಮಾತಾ ಕಂಬೈನ್ಸ್ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ. ಜೊತೆಗೆ ಸಿನಿಮಾದ ಪೋಸ್ಟರ್ ಕೂಡ ಬಿಡುಗಡೆ ಮಾಡಲಾಗಿದೆ.

ಶ್ರೀ ಜೈಮಾತಾ ಕಂಬೈನ್ಸ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹುಲಿ ಕಾರ್ತಿಕ್ ಅವರ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ಜೊತೆಗೆ ‘ದಿ ಡೆವಿಲ್’ ಮತ್ತೊಬ್ಬ ಪ್ರಮುಖ ಪೋಷಕ ಪಾತ್ರಧಾರಿ ಹುಲಿ ಕಾರ್ತಿಕ್’ ಎಂದು ಬರೆದುಕೊಂಡಿದೆ. ಶಿವಮೊಗ್ಗದ ತೀರ್ಥಹಳ್ಳಿಯ ಹುಡುಗ ಕಾರ್ತಿಕ್ ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮಗಳಲ್ಲಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿದ್ದರು. ಈಗ ಹುಲಿ ಕಾರ್ತಿಕ್ ಅವರಿಗೆ ಡೆವಿಲ್ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ.
.‘ಡೆವಿಲ್’ ಸಿನಿಮಾದಲ್ಲಿ ಗಿಲ್ಲಿ ನಟ; ಪೋಸ್ಟರ್ ಬಿಡುಗಡೆ ಮಾಡಿದ ಚಿತ್ರತಂಡ.‘ಡೆವಿಲ್’ ಹೊಸ ಹಾಡಿಗೆ ಸಜ್ಜಾಗಿ: ಚಿತ್ರತಂಡದಿಂದ ಅಪ್ಡೇಟ್.
ಇನ್ನು, ಡೆವಿಲ್ ಸಿನಿಮಾ ಡಿಸೆಂಬರ್ 12ರಂದು ಬಿಡುಗಡೆಯಾಗಲಿದೆ. ಮಿಲನಾ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ನಟಿಸಿದ್ದಾರೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆದಿರುವ ಡೆವಿಲ್ ಸಿನಿಮಾದ ಮೇಲೆ ಅಭಿಮಾನಿಗಳು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಜೆ.ಜಯಮ್ಮ ನಿರ್ಮಾಣ ಮಾಡಿರುವ ‘ಡೆವಿಲ್’ನ ಚಿತ್ರೀಕರಣ ಬೆಂಗಳೂರು, ರಾಜಸ್ಥಾನ, ಬ್ಯಾಂಕಾಕ್ ಮುಂತಾದ ಕಡೆ ನಡೆದಿದೆ. ಸುಧಾಕರ್ ಎಸ್.ರಾಜ್ ಛಾಯಾಚಿತ್ರಗ್ರಹಣ, ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ.ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.