ಬುಧವಾರ, ಮಾರ್ಚ್ 29, 2023
32 °C

‘ಹುಲಿಬೇಟೆ’ ಚಿತ್ರೀಕರಣ ಮುಕ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾನುಬಾಯ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಹುಲಿಬೇಟೆ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ. ಚಿತ್ರ ಜನವರಿಯಲ್ಲಿ ತೆರೆಗೆ ಬರಲಿದೆ. ವಿಶ್ವ ಈ ಚಿತ್ರದ ನಾಯಕ. ಮಾಸ್ಟರ್‌ ಆನಂದ್‌ ಕೂಡಾ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಯಚೂರು, ಶಾವೂರ್, ಯಾದಗಿರಿ, ತುಮಕೂರು ಹಾಗೂ ಬೆಂಗಳೂರಿನಲ್ಲಿ 85 ದಿನಗಳ ಚಿತ್ರೀಕರಣ ನಡೆದಿದೆ.

ಕನ್ನಡ ನಾಡು, ನುಡಿ, ಜಲ ಹಾಗೂ ಭಾಷೆ ಹಿನ್ನೆಲೆಯ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರಾಜ್ ಬಹದ್ದೂರ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ, ಗೀತರಚನೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ.

ನಾಗಣ್ಣ, ರವಿ ಕಾರಂಜಿ ಹಾಗೂ ಮಹೇಶ್ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ರಾಜ್ ಬಹದ್ದೂರ್ ಅವರ ಮೊದಲ ನಿರ್ದೇಶನದ ಚಿತ್ರವಿದು.

ರೋಹಿಣಿ ಕುಲಕರ್ಣಿ ನಾಯಕಿ. ತಮ್ಮ ಅಭಿನಯ, ನಿರೂಪಣೆ ಮೂಲಕ ಮನೆಮಾತಾಗಿರುವ ಮಾಸ್ಟರ್ ಆನಂದ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಂಜು ಸ್ವಾಮಿ,ಬಾಬು ಖಾನ್, ಗಣೇಶ್, ವಿಶಾಲ್, ವೆಂಕಿ, ಗಿಲ್ಲಿ ವೆಂಕಟೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಾಲ್ಕು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.

ಧನ್ ಪಾಲ್ ಛಾಯಾಗ್ರಹಣ, ಹರ್ಷವರ್ಧನ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಹಾಗೂ ಮಂಜು ನಾಗಪ್ಪ ಅವರ ಸಾಹಸ ನಿರ್ದೇಶನ ‘ಹುಲಿಬೇಟೆ’ ಚಿತ್ರಕ್ಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು