ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'Pushpa 2' teaser: ಕಾಳಿಯಂತೆ ಅಲ್ಲು ಅರ್ಜುನ್ ಅಬ್ಬರ

Published 8 ಏಪ್ರಿಲ್ 2024, 7:53 IST
Last Updated 8 ಏಪ್ರಿಲ್ 2024, 7:53 IST
ಅಕ್ಷರ ಗಾತ್ರ

ಬೆಂಗಳೂರು: ತೆಲುಗಿನ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ‘ಪುಷ್ಪಾ 2: ದಿ ರೂಲ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಅಲ್ಲು ಅರ್ಜುನ್ ಹುಟ್ಟುಹಬ್ಬದ ದಿನದಂದೇ ಚಿತ್ರ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀಸ್ ಟೀಸರ್ ಬಿಡುಗಡೆ ಮಾಡಿದೆ.

ಟೀಸರ್ ಅನ್ನು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಅಲ್ಲು ಅರ್ಜುನ್, ‘ನನಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರತಿಯೊಬ್ಬರಿಗೂ ಧನ್ಯವಾದ. ನನ್ನ ಹೃದಯ ಕೃತಜ್ಞತೆಯಿಂದ ತುಂಬಿಹೋಗಿದೆ. ದಯವಿಟ್ಟು ಟೀಸರ್ ನೋಡಿ. ಇದು ನಾನು ಧನ್ಯವಾದ ತಿಳಿಸುವ ಪರಿ’ ಎಂದು ಬರೆದುಕೊಂಡಿದ್ದಾರೆ.

ತೆಲಂಗಾಣದ ಪ್ರಸಿದ್ಧ ಸಮ್ಮಕ್ಕ ಸರಳಮ್ಮ ಜಾತ್ರೆಯ ಸಂದರ್ಭದ ದೃಶ್ಯದ ಮೂಲಕ ಟೀಸರ್ ಆರಂಭವಾಗುತ್ತದೆ. ಸೀರೆಯುಟ್ಟು ಕಾಳಿ ಲುಕ್‌ನಲ್ಲಿ ಅಲ್ಲು ಅರ್ಜುನ್ ಎಂಟ್ರಿ ಕೊಡುತ್ತಾರೆ. ಅಲ್ಲು ಅವರ ರಗಡ್ ಲುಕ್ ವೀಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ನೋಡುವಂತೆ ಮಾಡಿದೆ. ಅಂತೆಯೇ ಚಿತ್ರದ ಬಗೆಗಿನ ಕುತೂಹಲವನ್ನೂ ಇಮ್ಮಡಿಗೊಳಿಸಿದೆ. ಕಾಳಿ ವೇಷದ ಅಲ್ಲು ಅರ್ಜುನ್ ಅವರ ಫೈಟಿಂಗ್ ದೃಶ್ಯಗಳು ರೋಮಾಂಚನಕಾರಿಯಾಗಿವೆ.

ನಿರ್ದೇಶಕ ಸುಕುಮಾರನ್ ಅವರು, ಆದಿವಾಸಿ ದೇವತೆಯ ಜಾತ್ರೆಯ ವಾತಾವರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಅದ್ಭುತವಾಗಿ ತೋರಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಮತ್ತು ಮುತ್ತಂಶೆಟ್ಟಿ ಮೀಡಿಯಾ ಚಿತ್ರ ನಿರ್ಮಾಣ ಮಾಡಿದೆ.

ಇದೇ ವರ್ಷ ಆಗಸ್ಟ್ 15ರಂದು ಚಿತ್ರ ತೆರೆಗೆ ಬರಲಿದೆ. ಪುಷ್ಪ ಮೊದಲ ಭಾಗಕ್ಕೆ ಅಲ್ಲು ಅರ್ಜುನ್ ಅವರಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ.

ರಕ್ತಚಂದನ ಕಳ್ಳಸಾಗಣೆಯ ಕಥಾಹಂದರವನ್ನು ಒಳಗೊಂಡ ಚಿತ್ರ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT