ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಆರೋಪದ ಮೇಲೆ ಬಂಧಿತರಾಗಿ ಇತ್ತೀಚೆಗೆ ಬಿಡುಗಡೆಯಾಗಿ ಜೈಲಿನಿಂದ ಹೊರಗೆ ಬಂದಿರುವ ನಟ ದರ್ಶನ್ ತೂಗೂದೀಪ ಅವರು ತಮ್ಮ ಜನ್ಮದಿನವನ್ನು (ಫೆ.16) ಆಚರಿಸಿಕೊಂಡಿರಲಿಲ್ಲ.

ಅದಾಗ್ಯೂ ಹಲವರು ದರ್ಶನ್ ಮನೆ ಬಳಿ ತೆರಳಿ ದರ್ಶನ್ಗೆ ಶುಭಕೋರಿದ್ದರು. ಇದಕ್ಕೂ ಮೊದಲು ತಾನು ಈ ಸಾರಿ ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ ಎಂದು ಅವರು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ನಿನ್ನೆ ಅಭಿಮಾನಿಗಳನ್ನು ನೆನೆದು ಭಾವುಕ ಪೋಸ್ಟ್ ಒಂದನ್ನು ದರ್ಶನ್ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ ಎಂದು ಹೇಳಿಕೊಂಡಿದ್ದಾರೆ.

ಪತ್ರದಲ್ಲಿ ಏನಿದೆ?

‘‘ಪ್ರೀತಿಯ ಸೆಲೆಬ್ರಿಟಿಸ್ಗಳೇ ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ. ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ ನಿಮ್ಮ ದಾಸ ದರ್ಶನ್‘‘ ಎಂದು ಬರೆದಿದ್ದಾರೆ.

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದು, ದರ್ಶನ್ ಅಭಿಮಾನಿಗಳು ದರ್ಶನ್ ಅವರನ್ನು ಸಂತೈಸುತ್ತಿದ್ದಾರೆ.
.ಜೈಲಿನಿಂದ ಹೊರ ಬಂದ ಮೇಲೆ ನಟ ದರ್ಶನ್ ಮೊದಲ ವಿಡಿಯೊ ಬಿಡುಗಡೆ: ಹೇಳಿದ್ದೇನು?.ಕೊಲೆ ಪ್ರಕರಣ: ದರ್ಶನ್ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.