ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನನ್ನು ಕಾಡುವುದ ನಿಲ್ಲಿಸಿದರೆ ಮಹಾರಾಷ್ಟ್ರ ಸರ್ಕಾರಕ್ಕೆ ವಾಸ್ತವ ಅರ್ಥವಾಗುತ್ತೆ

Last Updated 21 ಸೆಪ್ಟೆಂಬರ್ 2020, 14:09 IST
ಅಕ್ಷರ ಗಾತ್ರ

ಮುಂಬೈ: ಶಿವಸೇನಾ ನಾಯಕರೊಂದಿಗೆ ಕಳೆದ ಕೆಲವು ದಿನಗಳಿಂದ ವಾಗ್ವಾದ ನಡೆಸುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್, ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿ ಕಟ್ಟಡ ಕುಸಿದು ಕನಿಷ್ಠ 10 ಜನರು ಮೃತಪಟ್ಟ ಬಳಿಕ ಸೋಮವಾರ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಟ್ವಿಟರ್ ಬಳಕೆದಾರರೊಬ್ಬರು ಮೂರು ಅಂತಸ್ತಿನ ಕಟ್ಟಡದ ಕುಸಿತದ ಬಗ್ಗೆ ಲೇಖನವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡು ಕಂಗನಾ ಟೀಂಗೆ ಟ್ಯಾಗ್ ಮಾಡಿದ ಬಳಿಕ ಅದನ್ನು ರೀಟ್ವೀಟ್ ಮಾಡಿರುವ ಕಂಗನಾ, ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

ಇದೇ ವೇಳೆ ಮಹಾರಾಷ್ಟ್ರ ಸರ್ಕಾರವು क-क-क-क-कंगना ..... ನನ್ನನ್ನು ನಿರಂತರವಾಗಿ ಪೀಡಿಸುವುದನ್ನು ನಿಲ್ಲಿಸಿದರೆ ಇಡೀ ರಾಜ್ಯವು ಹೇಗೆ ಕುಸಿಯುತ್ತಿದೆ ಎಂಬುದು ಅವರಿಗೆ ತಿಳಿಯುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ನೋವಿನ ದೃಶ್ಯಗಳು! ಮಹಾರಾಷ್ಟ್ರ ಸರ್ಕಾರಕ್ಕೆ ಕಂಗನಾ ತಂಡದ ಕಚೇರಿಯನ್ನು ಕೆಡವಲು ಮಾತ್ರ ಸಮಯವಿದ್ದಾಗ ಈ ರೀತಿಯ ಅವಘಡಗಳು ಸಂಭವಿಸುತ್ತವೆ ಎಂದು ಟ್ವಿಟರ್ ಬಳಕೆದಾರರು ಬರೆದುಕೊಂಡಿದ್ದರು.

ಭಿವಾಂಡಿಯ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಮುಂಜಾನೆ 3.40 ರ ಸುಮಾರಿಗೆ ಕಟ್ಟಡ ಕುಸಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT