ಶನಿವಾರ, ಸೆಪ್ಟೆಂಬರ್ 25, 2021
27 °C

‘ಐ ಲವ್‌ ಯು’ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆರ್‌. ಚಂದ್ರು ನಿರ್ದೇಶನದ ‘ಐ ಲವ್‌ ಯು’ ಚಿತ್ರಕ್ಕೆ ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಯು/ಎ ಪ್ರಮಾಣ ಪತ್ರ ನೀಡಿದೆ. 

ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಈ ಚಿತ್ರ ಬಿಡುಗಡೆಯಾಗಲಿದೆ. ‘ರಿಯಲ್‌ ಸ್ಟಾರ್’ ಉಪೇಂದ್ರ ಅವರಿಗೆ ರಚಿತಾ ರಾಮ್‌ ಮತ್ತು ಸೋನು ಗೌಡ ಸಾಥ್‌ ನೀಡಿದ್ದಾರೆ. ಸದ್ಯ ಉಪ್ಪಿ ಕುಟುಂಬ ಸಮೇತ ಅಮೆರಿಕ ಪ್ರವಾಸದಲ್ಲಿದ್ದಾರೆ.

ಮೇ ತಿಂಗಳಿನಲ್ಲಿಯೇ ಸಿನಿಮಾ ಬಿಡುಗಡೆಗೆ ಈ ಮೊದಲು ಚಿತ್ರತಂಡ ಯೋಚಿಸಿತ್ತು. ಆದರೆ, ಇದೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಹಾಗಾಗಿ, ಉಪ್ಪಿ ವಿದೇಶ ‍ಪ್ರವಾಸದಿಂದ ಮರಳಿದ ಬಳಿಕ ಬಿಡುಗಡೆಯ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ. ಉಪ್ಪಿ ಜೂನ್‌ನಲ್ಲಿ ಜನರ ಮುಂದೆ ‘ಐ ಲವ್‌ ಯು’ ಹೇಳಲು ಬರುವ ನಿರೀಕ್ಷೆಯಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು