ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇನಾಮ್ದಾರ್’ಕಥೆ ಗೊತ್ತೇ?

Last Updated 3 ಡಿಸೆಂಬರ್ 2022, 3:15 IST
ಅಕ್ಷರ ಗಾತ್ರ

ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ ‘ಇನಾಮ್ದಾರ್’ ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣ‌ಸಂಘರ್ಷದ ಕಥೆ ‘ಇನಾಮ್ದಾರ್‌’. ಟ್ರೈಲರ್‌ ತುಂಬಾ ಭರವಸೆ ಮೂಡಿಸುವಂತಿದೆ. ಹಿಂದಿನ ಕಾಲಘಟ್ಟ ಮತ್ತು ಆಧುನಿಕ ಕಾಲಘಟ್ಟವನ್ನು ಮೇಳೈಸಿದ ಕಥಾ ವಸ್ತುವಿನಂತಿದೆ. ಸಹಜವಾಗಿ ಚಿತ್ರದ ಬಗ್ಗೆ ಕುತೂಹಲ ಹುಟ್ಟಿಸಿದೆ.

ಈ ಚಿತ್ರಕ್ಕೆ ‘ಕಪ್ಪು ಸುಂದರಿಯ ಸುತ್ತ’ ಎಂಬ ಅಡಿಬರಹವಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಬೆಳಗಾವಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌ ಡಬ್ಬಿಂಗ್ ಸಹ ಪೂರ್ಣವಾಗಿದೆ ಎಂದಿದ್ದಾರೆ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ. ನಿರಂಜನ್‌ ಶೆಟ್ಟಿ ತಲ್ಲೂರು ಈ ಚಿತ್ರದ ನಿರ್ದೇಶಕರು.

ಕಾಡಿನ ನಾಯಕನಾಗಿ ಪ್ರಮೋದ್‌ ಶೆಟ್ಟಿ: ‘ನನ್ನದು ಈ ಚಿತ್ರದಲ್ಲಿ ಕಾಡಿನ ನಾಯಕನ ಪಾತ್ರ. ತುಂಡು ಉಡುಗೆ, ಮೈ ಪೂರ್ತಿ ಕಪ್ಪು ಬಣ್ಣವಿರುತ್ತದೆ. ಬಣ್ಣ ಹಾಕಲು ಎರಡು ಗಂಟೆ, ತೆಗೆಯಲು ಐದು ಗಂಟೆ ಹಿಡಿಯುತ್ತಿತ್ತು’ ಎಂದು ಚಿತ್ರೀಕರಣದ ಅನುಭವವನ್ನು ಪ್ರಮೋದ್ ಶೆಟ್ಟಿ ಹಂಚಿಕೊಂಡರು.

‘ಅಭಿನಯದ ಅನುಭವವಿಲ್ಲದ ನನಗೆ ಅಭಿನಯ ಹೇಳಿಕೊಟ್ಟವರು ನಿರ್ದೇಶಕರು. ನನ್ನ ಅಭಿನಯ ಚೆನ್ನಾಗಿ ಬಂದಿದ್ದರೆ ಅದಕ್ಕೆ ನಿರ್ದೇಶಕರೆ ಕಾರಣ‌’ ಎಂದರು ನಿರಂಜನ್ ಛತ್ರಪತಿ.

ಚಿರಶ್ರೀ ಅಂಚಿನ್, ಎಸ್ತರ್ ನರೋನ್ಹಾ,‌ ಎಂ.ಕೆ.ಮಠ,‌ ರಘು ಪಾಂಡೇಶ್ವರ ತಾರಾಗಣದಲ್ಲಿದ್ದಾರೆ. ಸಂಗೀತ ನಿರ್ದೇಶಕ ರಾಕಿ ಸೋನು, ಛಾಯಾಗ್ರಾಹಕ ಮುರಳಿ, ಸಂಕಲನಕಾರ ಶಿವರಾಜ್ ‌ಮೇಹು ಹಾಗೂ ನೃತ್ಯ ನಿರ್ದೇಶಕಿ ಗೀತಾ ಸಾಯಿ ತಂಡದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT