ಬುಧವಾರ, ಫೆಬ್ರವರಿ 1, 2023
27 °C

‘ಇನಾಮ್ದಾರ್’ ಭರ್ಜರಿ ಟೀಸರ್‌. ಏನಿದು ಹೊಸ ಕಥೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಾಜಿ ಮಹಾರಾಜರನ್ನು ಆರಾಧಿಸುವ ‘ಇನಾಮ್ದಾರ್’ ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣ‌ಸಂಘರ್ಷದ ಕಥೆ ‘ಇನಾಮ್ದಾರ್‌’. ಟ್ರೈಲರ್‌ ತುಂಬಾ ಭರವಸೆ ಮೂಡಿಸುವಂತಿದೆ. ಹಿಂದಿನ ಕಾಲಘಟ್ಟ ಮತ್ತು ಆಧುನಿಕ ಕಾಲಘಟ್ಟವನ್ನು ಮೇಳೈಸಿದ ಕಥಾ ವಸ್ತುವಿನಂತಿದೆ. ಸಹಜವಾಗಿ ಚಿತ್ರದ ಬಗ್ಗೆ ಕುತೂಹಲ ಹುಟ್ಟಿಸಿದೆ.  

ಈ ಚಿತ್ರಕ್ಕೆ ‘ಕಪ್ಪು ಸುಂದರಿಯ ಸುತ್ತ’ ಎಂಬ ಅಡಿಬರಹವಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಬೆಳಗಾವಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌ ಡಬ್ಬಿಂಗ್ ಸಹ ಪೂರ್ಣವಾಗಿದೆ ಎಂದಿದ್ದಾರೆ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ. ನಿರಂಜನ್‌ ಶೆಟ್ಟಿ ತಲ್ಲೂರು ಈ ಚಿತ್ರದ ನಿರ್ದೇಶಕರು. 

ಕಾಡಿನ ನಾಯಕನಾಗಿ ಪ್ರಮೋದ್‌ ಶೆಟ್ಟಿ: ‘ನನ್ನದು ಈ ಚಿತ್ರದಲ್ಲಿ ಕಾಡಿನ ನಾಯಕನ ಪಾತ್ರ. ತುಂಡು ಉಡುಗೆ, ಮೈ ಪೂರ್ತಿ ಕಪ್ಪು ಬಣ್ಣವಿರುತ್ತದೆ. ಬಣ್ಣ ಹಾಕಲು ಎರಡು ಗಂಟೆ ಹಿಡಿಸಿದರೆ, ತೆಗೆಯಲು ಐದು ಗಂಟೆ ಹಿಡಿಸುತ್ತಿತ್ತು’ ಎಂದು ಚಿತ್ರೀಕರಣದ ಅನುಭವವನ್ನು ಪ್ರಮೋದ್ ಶೆಟ್ಟಿ ಹಂಚಿಕೊಂಡರು.

‘ಅಭಿನಯದ ಅನುಭವವಿಲ್ಲದ ನನಗೆ ಅಭಿನಯ ಹೇಳಿಕೊಟ್ಟವರು ನಿರ್ದೇಶಕರು. ನನ್ನ ಅಭಿನಯ ಚೆನ್ನಾಗಿ ಬಂದಿದ್ದರೆ, ಅದಕ್ಕೆ ನಿರ್ದೇಶಕರೆ ಕಾರಣ‌’ ಎಂದರು ನಿರಂಜನ್ ಛತ್ರಪತಿ.

ಚಿರಶ್ರೀ ಅಂಚಿನ್, ಎಸ್ತರ್ ನರೋನ್ಹಾ,‌ ಎಂ.ಕೆ.ಮಠ,‌ ರಘು ಪಾಂಡೇಶ್ವರ ತಾರಾಗಣದಲ್ಲಿದ್ದಾರೆ. ಸಂಗೀತ ನಿರ್ದೇಶಕ ರಾಕಿ ಸೋನು, ಛಾಯಾಗ್ರಾಹಕ ಮುರಳಿ, ಸಂಕಲನಕಾರ ಶಿವರಾಜ್ ‌ಮೇಹು ಹಾಗೂ ನೃತ್ಯ ನಿರ್ದೇಶಕಿ ಗೀತಾ ಸಾಯಿ ತಂಡದಲ್ಲಿದ್ದಾರೆ.

ಟೀಸರ್‌ ನೋಡಲು: 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು