ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತವೆಂದರೆ ಕೇವಲ ಹಿಂದಿಯಲ್ಲ: ನಟಿ ರಮ್ಯಾ

Last Updated 13 ಮಾರ್ಚ್ 2023, 9:17 IST
ಅಕ್ಷರ ಗಾತ್ರ

‘ನಾಟು–ನಾಟು’ ಗೀತೆಗೆ ಆಸ್ಕರ್‌ ಪ್ರಶಸ್ತಿ ಪಡೆದಿರುವ ‘ಆರ್‌ಆರ್‌ಆರ್‌’ ಚಿತ್ರತಂಡವನ್ನು ಅಭಿನಂದಿಸಿರುವ ನಟಿ ರಮ್ಯಾ, ಭಾರತವೆಂದರೆ ಕೇವಲ ಹಿಂದಿಯಲ್ಲ ಎಂದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ರಮ್ಯಾ. ನಾಟು-ನಾಟು ತೆಲುಗು ಗೀತೆ ಈ ಸಾಧನೆ ಮಾಡಿರುವುದು ನನಗೆ ತುಂಬಾ ಖುಷಿಯಾಗಿದೆ. ಭಾರತವು ವಿಭಿನ್ನ ಸಂಸ್ಕೃತಿಗಳು ಮತ್ತು ಭಾಷೆಗಳ ವೈವಿಧ್ಯಮಯ ದೇಶ ಎಂದು ಜಗತ್ತೀಗ ಗೊತ್ತಾಗಿದೆ. ಭಾರತವೆಂದರೆ ಕೇವಲ ಹಿಂದಿಯಲ್ಲ. ಭಾರತ ಕೇವಲ ಬಾಲಿವುಡ್ ಅಲ್ಲ. ಭಾರತವೆಂದರೆ ಹಿಂದಿಯೆಂಬ ರೂಢಿಗತ ಚಿಂತನೆಯೊಂದು ಆಲಸಿತನ ಎಂದಿದ್ದಾರೆ.

ಬೆಂಗಳೂರಿನಲ್ಲಿ ಕನ್ನಡ ಮಾತನಾಡುವುದಿಲ್ಲ ಎಂಬ ಹಿಂದಿ ಮಹಿಳೆಯನ್ನು ಆಟೊದಿಂದ ಕೆಳಕ್ಕಿಳಿಸಿದ ಆಟೊ ಚಾಲಕನ ವಿಡಿಯೊವನ್ನು ರಮ್ಯಾ ತಮ್ಮ ಟ್ವೀಟ್‌ನೊಂದಿಗೆ ಹಂಚಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT