ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇಂಡಿಯನ್‌–2’ ಜುಲೈ 12ಕ್ಕೆ ಬಿಡುಗಡೆ

Published 31 ಮೇ 2024, 20:24 IST
Last Updated 31 ಮೇ 2024, 20:24 IST
ಅಕ್ಷರ ಗಾತ್ರ

ಎರಡು ದಶಕಗಳ ಹಿಂದೆ ಬಿಡುಗಡೆಗೊಂಡಿದ್ದ ಬಹುಭಾಷಾ ನಟ ಕಮಲ್‌ಹಾಸನ್‌ ನಟನೆಯ, ಎಸ್‌.ಶಂಕರ್‌ ನಿರ್ದೇಶನದ ‘ಇಂಡಿಯನ್‌’ ಸಿನಿಮಾದ ಎರಡನೇ ಭಾಗ ಬಿಡುಗಡೆಗೆ ಸಜ್ಜಾಗಿದೆ. 

‘ಇಂಡಿಯನ್‌–2’ ಜುಲೈ 12ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್ ಹಾಗೂ ಹಾಡೊಂದರ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿದೆ ಈ ಚಿತ್ರ. ಇದೀಗ ಚಿತ್ರದ ಎರಡನೇ ಹಾಡು ಅನಾವರಣಗೊಂಡಿದೆ. ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಈ ಹಾಡು ಬಿಡುಗಡೆಯಾಗಿದೆ. ‘ಬೊಮ್ಮರಿಲ್ಲು’ ಸಿದ್ದಾರ್ಥ್ ಹಾಗೂ ರಾಕುಲ್ ಪ್ರೀತ್ ಸಿಂಗ್ ಜೋಡಿಯ ಪ್ರೇಮಗೀತೆ ಇದಾಗಿದೆ. ರಾಮ ಜೋಗಯ್ಯಶಾಸ್ತ್ರಿ ತೆಲುಗು ಹಾಡಿಗೆ ಸಾಹಿತ್ಯ ಬರೆದಿದ್ದು, ತಾಮರೈ ತಮಿಳು ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಅನಿರುದ್ಧ ರವಿಚಂದರ್ ಸಂಗೀತ ನಿರ್ದೇಶನ ಮಾಡಿದ್ದಾರೆ. 1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ‘ಸೇನಾಪತಿ’ ಎಂಬ ಪಾತ್ರದಲ್ಲಿ ಕಮಲ್‌ಹಾಸನ್ ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದೆ. 

ಕಮಲ್‌ಹಾಸನ್ ಜೊತೆಯಲ್ಲಿ ಸಿದ್ದಾರ್ಥ್, ಎಸ್.ಜೆ. ಸೂರ್ಯ, ಕಾಜಲ್ ಅಗರ್ವಾಲ್‌, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ ಮತ್ತಿತರರು ತಾರಾಬಳಗದಲ್ಲಿದ್ದಾರೆ. ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT