ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬದಲಾಯಿತು ಇನ್ನೋವೇಟಿವ್ ಫಿಲಂ ಸಿಟಿ ಹೆಸರು

Last Updated 28 ಅಕ್ಟೋಬರ್ 2021, 6:13 IST
ಅಕ್ಷರ ಗಾತ್ರ

ಬಿಡದಿ ಬಳಿಯ ಇನ್ನೋವೇಟಿವ್ ಫಿಲಂ ಸಿಟಿಯನ್ನು ಚೆನ್ನೈನ ಖ್ಯಾತ ನಿರ್ಮಾಪಕ, ನಟ ಹಾಗೂ ಉದ್ಯಮಿ ವೇಲ್ಸ್ ಗ್ರೂಪ್ ನ ಮುಖ್ಯಸ್ಥ ಡಾ.ಐಸಿರಿ ಕೆ. ಗಣೇಶ್ ಖರೀದಿಸಿದ್ದಾರೆ‌.

ಇನ್ನು ಮುಂದೆ ವೇಲ್ಸ್‌ ಇನ್ನೋವೇಟಿವ್ ಫಿಲಂ ಸಿಟಿ ಎಂದು ಕರೆಯಲಾಗುವುದು ಎಂದುವೇಲ್ಸ್ ಇನ್ನೋವೇಟಿವ್ ಫಿಲಂ ಸಿಟಿಯ ಮ್ಯಾನೇಜರ್ ಬಶೀರ್ ಅಹ್ಮದ್ ತಿಳಿಸಿದ್ದಾರೆ‌.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಶೀರ್ ಅವರು, ಕರ್ನಾಟಕದ ಮೇಲೆ ಅಪಾರ ಪ್ರೀತಿ ಹೊಂದಿರುವ ಗಣೇಶ್‌ ಅವರು ಈ ಜಾಗವನ್ನು ಖರೀದಿಸಿದ್ದಾರೆ ಹಾಗೂ ಅನೇಕ ಜಾಗತಿಕ ಮಟ್ಟದ ಶಾಲೆಗಳನ್ನು ತೆಗೆದುಕೊಂಡು, ವೇಲ್ಸ್ ರವೀಂದ್ರ ಭಾರತಿ ಶಾಲೆ ಎಂದು ನಾಮಕರಣ ಮಾಡಿದ್ದಾರೆ. ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದಾರೆ ಎಂಬ ವಿಷಯವನ್ನು ತಿಳಿಸಿದ್ದಾರೆ.

ಮೈ ಮೂವೀ ಬಜಾರ್ ಹಾಗೂ ಶ್ರೇಯಸ್‌ ಮೀಡಿಯಾ ಮುಖ್ಯಸ್ಥ ನವರಸನ್ ಮಾಹಿತಿ ನೀಡಿ, ‘ಗಣೇಶ್‌ ಅವರು ತಮಿಳಿನಲ್ಲಿ ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಇನ್ನೋವೇಟಿವ್ ಫಿಲಂ ಸಿಟಿಗೆ ನೂತನ ಕಾಯಕಲ್ಪ ನೀಡಲು ಸಜ್ಜಾಗಿದ್ದಾರೆ. ಸದ್ಯ ಇನ್ನೋವೇಟಿವ್ ಫಿಲಂ ಸಿಟಿಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಫೆಬ್ರವರಿ ಅಂತ್ಯದ ವೇಳೆಗೆ ನೀವು ಈ ಫಿಲಂ ಸಿಟಿಯನ್ನು ಹೊಸರೂಪದಲ್ಲಿ ನೋಡಬಹುದು. ಸದ್ಯದಲ್ಲೇ ಇದರ ಕಾರ್ಯ ಆರಂಭವಾಗಲಿದೆ’ ಎಂದರು.

‘ರೈಲು ನಿಲ್ದಾಣ ಸೇರಿದಂತೆ ಹಲವು ಸೆಟ್ ನಿರ್ಮಿಸಲಾಗುತ್ತಿದೆ. ಇನ್ನು ಮುಂದೆ ಕನ್ನಡ ಸಿನಿಮಾ ಚಿತ್ರೀಕರಣಕ್ಕೆ ಬೇರೆ ಊರಿಗೆ ಹೋಗದೆ, ಅಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಈ ಫಿಲಂ ಸಿಟಿಯಲ್ಲಿ ನೀಡುವ ಉದ್ದೇಶವಿದೆ. ಚಿತ್ರದ ಮುಹೂರ್ತ ಸಮಾರಂಭಕ್ಕೆ ಉಚಿತವಾಗಿ ಅವಕಾಶ ನೀಡಲಾಗುವುದು. ನಮ್ಮ ಸಂಸ್ಥೆ ವೇಲ್ಸ್ ಇನ್ನೋವೇಟಿವ್‌ ಫಿಲಂ ಸಿಟಿಯೊಂದಿಗೆ ವರ್ಕಿಂಗ್ ಪಾರ್ಟ್ನರ್ ಆಗಿ ಕಾರ್ಯ ನಿರ್ವಹಿಸಲಿದೆ. ಇನ್ನೂ ನಮ್ನ ಮೈ ಮೂವೀ ಬಜಾರ್ ಆಪ್ ಸಿದ್ಧವಾಗುತ್ತಿದ್ದು, ಇದು ಸಹ ಚಿತ್ರರಂಗದ ಎಲ್ಲಾ ನಿರ್ಮಾಪಕರಿಗೆ ಅನುಕೂಲವಾಗಿರಲಿದೆ. ಈ ಎಲ್ಲಾ ಕಾರ್ಯಗಳಿಗೂ ನಿಮ್ಮ ಬೆಂಬಲವಿರಲಿ’ ಎಂದರು ನವರಸನ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT