ಸೋಮವಾರ, ಜೂನ್ 14, 2021
20 °C

ಐರಾವನ್ ಚಿತ್ರ ತಂಡದಿಂದ ಆಮ್ಲಜನಕ ಆಂಬುಲೆನ್ಸ್ ಸೇವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ ಎರಡನೇ ಅಲೆಯ ತೀವ್ರತೆಗೆ ಹಲವೆಡೆ ಆಮ್ಲಜನಕದ ಕೊರತೆ ಉಂಟಾಗಿ ಸಮಸ್ಯೆಯಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಆರೋಗ್ಯ ಭಾರತಿ ಮತ್ತು ಸೇವಾ ಭಾರತಿ ಸಹಯೋಗದಲ್ಲಿ ಐರಾವನ್ ಚಿತ್ರತಂಡವು ಇದೀಗ ಆಮ್ಲಜನಕ ವಾಹನವನ್ನು ಸೇವೆಗೆ ನಿಯೋಜಿಸಿದ್ದಾರೆ.

ಚಿತ್ರದ ನಿರ್ಮಾಪಕ ಡಾ.ನಿರಂತರ್ ಗಣೇಶ್ ಮತ್ತು ಚಿತ್ರದ ನಾಯಕ ಜಯರಾಮ್ ಕಾರ್ತಿಕ್ (ಜೆಕೆ) ಮತ್ತು ನಟ ವಿವೇಕ್ ಈ ವಾಹನವನ್ನು ಭಾನುವಾರ ಬ್ಯಾಟರಾಯನಪುರ ವ್ಯಾಪ್ತಿಗೆ ನೀಡಿದ್ದಾರೆ. ಅದರ ಜತೆಗೆ 10 ಸಾವಿರ ಕೋವಿಡ್ ಮೆಡಿಕಲ್ ಕಿಟ್‌ಗಳನ್ನೂ ವಿತರಣೆ ಮಾಡಿದ್ದಾರೆ. ಈ ಕಾರ್ಯಕ್ಕೆ ಆರ್‌ಎಸ್‌ಎಸ್‌ ಪ್ರಾದೇಶಿಕ ಪ್ರಧಾನ ಕಾರ್ಯದರ್ಶಿ ಎನ್. ತಿಪ್ಪೇಸ್ವಾಮಿ, ಆರೋಗ್ಯ ಭಾರತಿ ಜಂಟಿ ಕಾರ್ಯದರ್ಶಿ ಗಂಗಾಧರನ್ ಚಾಲನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ನಿರ್ಮಾಪಕ ನಿರಂತರ್, ‘ಇಂತಹ ಸಂಕಷ್ಟದ ಕಾಲಘಟ್ಟದಲ್ಲಿ ಸಮಾಜಕ್ಕೆ ಈ ರೀತಿಯ ಸೇವೆ ನಮ್ಮ ಜವಾಬ್ದಾರಿ. ಎಲ್ಲೆಡೆ ಆಂಬುಲೆನ್ಸ್‌ ಕೊರತೆ ಕಾಡುತ್ತಿದೆ. ಅದನ್ನೇ ಗಮನದಲ್ಲಿಟ್ಟುಕೊಂಡು ಬ್ಯಾಟರಾಯನಪುರ ವ್ಯಾಪ್ತಿಗೆ ಆಮ್ಲಜನಕ ಸಹಿತ ಆಂಬುಲೆನ್ಸ್ ನೀಡಿದ್ದೇವೆ. ಇದರ ಜೊತೆಗೆ ಕೋವಿಡ್ ಮೆಡಿಕಲ್ ಕಿಟ್ ಅನ್ನೂ ವಿತರಣೆ ಮಾಡಿದ್ದೇವೆ. ಸೋಂಕಿನ ಲಕ್ಷಣ ಕಾಣುತ್ತಿದ್ದಂತೆ ಕಿಟ್‌ನಲ್ಲಿ ನೀಡಿದ ಔಷಧಗಳನ್ನು ತೆಗೆದುಕೊಳ್ಳಬಹುದು. ಯಾವ ಔಷಧ ತೆಗೆದುಕೊಳ್ಳಬೇಕು ಎಂಬ ಮಾಹಿತಿಯನ್ನೂ ನೀಡಿದ್ದೇವೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು