ಗುರುತೇಜ್ ಶೆಟ್ಟಿ ನಿರ್ದೇಶನದ, ‘ಕನ್ನಡತಿ’ ಖ್ಯಾತಿಯ ಕಿರಣ್ ರಾಜ್ ನಾಯಕರಾಗಿ ನಟಿಸುತ್ತಿರುವ ‘ಜಾಕಿ–42’ ಸಿನಿಮಾದ ನಾಯಕಿಯಾಗಿ ಹೃತಿಕಾ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ.

ಚಿತ್ರದಲ್ಲಿ ಮಾಡರ್ನ್ ಹುಡುಗಿಯಾಗಿ ಕಾಣಿಸಿಕೊಳ್ಳಲಿರುವ ಹೃತಿಕಾ ಪಾತ್ರಕ್ಕೆ ಎರಡು ಶೇಡ್ಗಳಿವೆ ಎಂದು ಚಿತ್ರತಂಡ ತಿಳಿಸಿದೆ. ‘ಆರಾಮ್ ಅರವಿಂದ ಸ್ವಾಮಿ’, ‘ಔಟ್ ಆಫ್ ಸಿಲಬಸ್’, ಯೋಗರಾಜ್ ಭಟ್ ಸಿನಿಮಾಸ್ ಹಾಗೂ ರವಿ ಶಾಮನೂರು ನಿರ್ಮಾಣದ ‘ಉಡಾಳ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿರುವ ಹೃತಿಕಾ, ಸದ್ಯ ತೆಲುಗು ಚಿತ್ರವೊಂದರ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಸದ್ಯದಲ್ಲೇ ‘ಜಾಕಿ-42’ ಚಿತ್ರತಂಡ ಸೇರಿಕೊಳ್ಳಲಿದ್ದಾರೆ.

‘ಜಾಕಿ-42’ ಸಿನಿಮಾದ ಕಥೆ ಹಾರ್ಸ್ ರೇಸ್ ಹಿನ್ನೆಲೆಯಲ್ಲಿ ಸಾಗುತ್ತದೆ. ಗೋಲ್ಡನ್ ಗೇಟ್ ಸ್ಟುಡಿಯೊಸ್ ಬ್ಯಾನರ್ನಲ್ಲಿ ಭಾರತಿ ಸತ್ಯನಾರಾಯಣ ಈ ಚಿತ್ರ ನಿರ್ಮಿಸುತ್ತಿದ್ದಾರೆ. ತೆಲುಗು ಹಾಗೂ ತಮಿಳಿನ ಜನಪ್ರಿಯ ಚಿತ್ರಗಳಿಗೆ ಸಂಗೀತ ನೀಡಿರುವ ವಿನೋದ್ ಯಜಮಾನಿ ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ರಾಘವೇಂದ್ರ ಬಿ. ಕೋಲಾರ್, ಉಮೇಶ್ ಆರ್.ಬಿ., ಸತೀಶ್ ಪೆರ್ಡೂರು ತಂತ್ರಜ್ಞರ ತಂಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಕನ್ನಡ, ತಮಿಳು ಹಾಗೂ ತೆಲುಗಿನ ಹೆಸರಾಂತ ಕಲಾವಿದರು ತಾರಾಗಣದಲ್ಲಿರಲಿದ್ದಾರೆ. ಈಗಾಗಲೇ ಹಾರ್ಸ್ ರೇಸ್ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನೆಡೆದಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.