ಶನಿವಾರ, ಜನವರಿ 29, 2022
22 °C

ಸುಕೇಶ್ ಜೊತೆಗಿನ ಮತ್ತೊಂದು ಫೋಟೊ ವೈರಲ್; ನ್ಯಾಯ ಗೆಲ್ಲುತ್ತದೆ ಎಂದ ಜಾಕ್ವೆಲಿನ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಜ. 8 ರಂದು ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸುಕೇಶ್ ಚಂದ್ರಶೇಖರ್ ಅವರು ಆಪ್ತವಾಗಿದ್ದ ಫೋಟೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಂಚನೆ ಆರೋಪ ಎದುರಿಸುತ್ತಿರುವ ಸುಖೇಶ್ ಚಂದ್ರಶೇಖರ್‌ ಮತ್ತು ಜಾಕ್ವೆಲಿನ್ ನಡುವೆ ಸಂಬಂಧವಿದೆ ಎನ್ನುವ ಗುಸುಗುಸು ಆರಂಭವಾಗಿತ್ತು.

₹ 200 ಕೋಟಿ ಸುಲಿಗೆ ಪ್ರಕರಣದಲ್ಲಿ ತನ್ನ ಹೆಸರನ್ನು ಎಳೆದ ನಂತರ ಮೊದಲ ಬಾರಿಗೆ ನಟಿ ತನ್ನ ಇನ್‌ಸ್ಟಾಗ್ರಾಂನಲ್ಲಿ ಹೇಳಿಕೆಯೊಂದನ್ನು ಪೋಸ್ಟ್ ಮಾಡಿದ್ದಾರೆ. 'ನ್ಯಾಯ ಮತ್ತು ಒಳ್ಳೆಯ ಪ್ರಜ್ಞೆಯು ಮೇಲುಗೈ ಸಾಧಿಸುತ್ತದೆ' ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ಉದ್ಯಮಿಗಳಿಗೆ ₹ 200 ಕೋಟಿ ವಂಚನೆ ಹಾಗೂ ಹಣ ಅಕ್ರಮ ವರ್ಗಾವಣೆ ಪ್ರಕರಣದ ಕಿಂಗ್​ಪಿನ್​ ಸುಕೇಶ್​ ಚಂದ್ರಶೇಖರ್ ಜತೆ ಜಾಕ್ವೆಲಿನ್ ಲಿಂಕ್ ಹೊಂದಿದ್ದರು ಎನ್ನಲಾಗಿದ್ದು, ಇವರಿಬ್ಬರ ಹಲವು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಇತ್ತೀಚೆಗೆ ಇಬ್ಬರೂ ಆಪ್ತವಾಗಿದ್ದ ಫೋಟೋ ವೈರಲ್​ ಆಗಿತ್ತು. ಈಗ ಜಾಕ್ವೆಲಿನ್ ಫರ್ನಾಂಡಿಸ್​ ಮತ್ತು ಸುಕೇಶ್ ಚಂದ್ರಶೇಖರ್ ಇಬ್ಬರ ನಡುವಿನ ಹೊಸ ರೊಮ್ಯಾಂಟಿಕ್ ಪೋಟೊ ಬಿಡುಗಡೆ ಆಗಿದ್ದು, ಫೋಟೊದಲ್ಲಿ ಜಾಕ್ವೆಲಿನ್​ ಮೂಗಿಗೆ ಸುಕೇಶ್​ ಕಿಸ್​ ಮಾಡುತ್ತಿದ್ದಾರೆ. ಇದಾದ ಬಳಿಕ ಜಾಕ್ವೆಲಿನ್ ಹೇಳಿಕೆ ಬಿಡುಗಡೆ ಮಾಡಿದ್ದು, ಕಮೆಂಟ್ ಅನ್ನು ನಿರ್ಬಂಧಿಸಿದ್ದಾರೆ.

‘ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇದರಲ್ಲಿ ಮಾಧ್ಯಮದ ಸ್ನೇಹಿತರೂ ಸೇರಿದ್ದಾರೆ. ಅವರಿಂದ ನಾನು ಬಹಳಷ್ಟು ಕಲಿತಿದ್ದೇನೆ. ಸದ್ಯ ನಾನು ಕಷ್ಟದ ದಿನಗಳನ್ನು ಎದುರಿಸುತ್ತಿದ್ದೇನೆ. ನನ್ನ ಸ್ನೇಹಿತರು ಮತ್ತು ಅಭಿಮಾನಿಗಳಿಗೂ ಇದನ್ನು ನೋಡುತ್ತಿದ್ದಾರೆ ಎಂದುಕೊಂಡಿದ್ದೇನೆ. ನನ್ನ ಗೌಪ್ಯತೆ ಮತ್ತು ವೈಯಕ್ತಿಕ ಜಾಗವನ್ನು ಆಕ್ರಮಿಸುವಂತಹ ಚಿತ್ರಗಳನ್ನು ಪ್ರಸಾರ ಮಾಡದಂತೆ ನಾನು ನನ್ನ ಮಾಧ್ಯಮ ಸ್ನೇಹಿತರಲ್ಲಿ ವಿನಂತಿ ಮಾಡುತ್ತೇನೆ. ನಿಮ್ಮ ಪ್ರೀತಿಪಾತ್ರರಿಗೆ ನೀವು ಈ ರೀತಿ ಮಾಡುವುದಿಲ್ಲ, ಅದೇ ರೀತಿ ನನಗೂ ಈ ರೀತಿ ಮಾಡುವುದಿಲ್ಲ ಎಂದು ನನಗೆ ಖಾತ್ರಿಯಿದೆ. ನ್ಯಾಯ ಮತ್ತು ಒಳ್ಳೆಯ ಪ್ರಜ್ಞೆಯು ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇವೆ. ಧನ್ಯವಾದಗಳು’ ಎಂದು ಜಾಕ್ವೆಲಿನ್​ ಬರೆದುಕೊಂಡಿದ್ದಾರೆ.

ಇವರಿಬ್ಬರ ಫೋಟೋಗಳು ವೈರಲ್ ಆಗುತ್ತಿರುವುದು ಇದೇ ಮೊದಲೇನಲ್ಲ. ಡಿಸೆಂಬರ್ 2021 ರಲ್ಲಿ ಇಂತಹ ಎರಡು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ತಾನು ಜಾಕ್ವೆಲಿನ್‌ನೊಂದಿಗೆ ಡೇಟಿಂಗ್ ಮಾಡುತ್ತಿದ್ದೇನೆ ಎಂದು ಸುಕೇಶ್ ಹೇಳಿದ ತಿಂಗಳುಗಳ ನಂತರ ಅವರಿಬ್ಬರ ಆಪ್ತ ಫೋಟೊಗಳು ಹರಿದಾಡಲು ಪ್ರಾರಂಭಿಸಿದವು. ಸುಕೇಶ್ ಜೊತೆ ಹೆಸರು ಕೇಳಿಬಂದ ನಂತರ ಜಾಕ್ವೆಲಿನ್ ಇ.ಡಿ ವಿಚಾರಣೆಯನ್ನು ಕೂಡ ಎದುರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು