ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಫ್ಯಾಂಟಮ್’ಗೆ ಬರಲಿದ್ದಾರೆ ಬಾಲಿವುಡ್‌ ಬೆಡಗಿ ಜಾಕ್ವೆಲಿನ್‌!

Last Updated 29 ಡಿಸೆಂಬರ್ 2020, 6:53 IST
ಅಕ್ಷರ ಗಾತ್ರ

ಕಿಚ್ಚ ಸುದೀಪ್ ನಟನೆಯ, ಅನೂಪ್ ಭಂಡಾರಿ ನಿರ್ದೇಶನದ ಬಹುನಿರೀಕ್ಷಿತ ‘ಫ್ಯಾಂಟಮ್‌’ ಚಿತ್ರ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಕಿಚ್ಚನ ಅಭಿಮಾನಿಗಳು ಸಿನಿಮಾ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಸಿನಿಮಾ ಘೋಷಣೆಯಾದಾಗಲೇ ಬಾಲಿವುಡ್‌ನ ಖ್ಯಾತನಾಮರು ಇದರಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಈ ಸುದ್ದಿಗೆ ಈಗ ಇನ್ನಷ್ಟು ಪುಷ್ಠಿ ಸಿಕ್ಕಿದೆ. ಅದೇನೆಂದರೆ ಬಾಲಿವುಡ್‌ನ ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್‌ ಚಿತ್ರದಲ್ಲಿ ವಿಶೇಷ ಪಾತ್ರವೊಂದರಲ್ಲಿ ನಟಿಸಲಿದ್ದು ಹಾಗೂ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ ಎಂಬ ಸುದ್ದಿ ಚಿತ್ರತಂಡ ಮೂಲದಲ್ಲಿ ಕೇಳಿ ಬರುತ್ತಿದೆ.

‘ಜಾಕ್ವೆಲಿನ್‌ ಅವರನ್ನು ಫ್ಯಾಂಟಮ್‌ ಚಿತ್ರದಲ್ಲಿ ನಟಿಸುವಂತೆ ಕೇಳಿಕೊಂಡಾಗ ಅವರು ಖುಷಿಯಿಂದ ಒಪ್ಪಿಕೊಂಡರು. ಹಾಡನ್ನು ಕೇಳಿಸಿಕೊಂಡ ಅವರು ತಮ್ಮ ಪಾತ್ರದ ಬಗ್ಗೆ ವಿವರಣೆ ಕೇಳಿದ್ದರು. ಅವರ ತಮ್ಮ ನಟನೆಯ ಭಾಗದ ಶೂಟಿಂಗ್‌ ಅನ್ನು ಮುಂದಿನ ಏಪ್ರಿಲ್‌ನಲ್ಲಿ ಮಾಡುವ ಸಾಧ್ಯತೆ ಇದೆ’ ಎಂದಿದ್ದಾರೆ ಚಿತ್ರದ ಸಹ ನಿರ್ಮಾಣ ಸಂಸ್ಥೆಯಾದ ಇನ್ವೆನಿಯೊ ಫಿಲ್ಸಂನ ಅಲಂಕಾರ್ ಪಾಂಡಿಯನ್‌.

ಫ್ಯಾಂಟಸಿ, ಆ್ಯಕ್ಷನ್‌, ಥ್ರಿಲ್ಲರ್ ಅಂಶಗಳನ್ನು ಹೊಂದಿರುವ ಫ್ಯಾಂಟಮ್ ಚಿತ್ರದ ಟೀಸರ್‌ ಅನ್ನು ದುಬೈನ ಬುರ್ಜ್ ಖಲೀಫಾದಲ್ಲಿ ಬಿಡುಗಡೆ ಮಾಡಲು ಯೋಚಿಸಿದೆ ಚಿತ್ರತಂಡ. ಚಿತ್ರಕ್ಕೆ ಅಜನೀಶ್ ಲೋಕ್‌ನಾಥ್ ಸಂಗೀತ ನಿರ್ದೇಶನವಿದೆ.

ಚಿತ್ರದಲ್ಲಿ ನಿರೂಪ್ ಭಂಡಾರಿ, ನೀತಾ ಅಶೋಕ್ ಮೊದಲಾದವರು ಮುಖ್ಯಭೂಮಿಕೆಯಲ್ಲಿ ನಟಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT