ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂತಾರ ಕೊಂಡಾಡಿದ ಜಗ್ಗೇಶ್‌!

Last Updated 19 ಅಕ್ಟೋಬರ್ 2022, 6:36 IST
ಅಕ್ಷರ ಗಾತ್ರ

ಹಿರಿಯ ಚಿತ್ರ ನಟ ಜಗ್ಗೇಶ್‌ ಸದ್ಯ ಟ್ರೆಂಡ್‌ನಲ್ಲಿರುವ ಕಾಂತಾರ ಚಿತ್ರವನ್ನು ನೋಡಿ ಮೆಚ್ಚಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಇಂದು ಅಮೆರಿಕದ ಡೆನ್ವರ್‌ನಲ್ಲಿ ಕಾಂತಾರ ನೋಡುವ ಅವಕಾಶ ಸಿಕ್ಕಿತು. ಕೊನೆಯ 25 ನಿಮಿಷ ನಾನು ಎಲ್ಲಿರುವೆ ಎಂಬುದು ಮರೆತು ಹೋಯಿತು ಎಂದಿದ್ದಾರೆ.

ನಟ, ನಿರ್ದೇಶಕ ರಿಷಬ್‌ ಶೆಟ್ಟಿಯನ್ನು ಅಭಿನಂದಿಸಿರುವ ಜಗ್ಗೇಶ್‌, ನಾನು ದಕ್ಷಿಣ ಕನ್ನಡದ ದೇವಾಲಯದ ಭಕ್ತ. ವರ್ಷಕ್ಕೆ ಒಂದು ಬಾರಿ ಪೊಳಲಿ, ಕಟೀಲು, ಉಡುಪಿ, ಮೂಕಾಂಬಿಕೆ, ಕೊರಗಜ್ಜ, ಅಂಬಲಪಾಡಿ ದರ್ಶನ ಪಡೆಯುವುದು ನನ್ನ 30 ವರ್ಷದ ಅಭ್ಯಾಸ. ಇದು ನನ್ನ ಪ್ರಕಾರ ಶ್ರೇಷ್ಠ ದೇವಭೂಮಿ. ಇಂಥ ನಾಡಿನಿಂದ ಎಂಥ ಅದ್ಭುತ ನಟ, ನಿರ್ದೇಶಕ ರಿಷಭ್ ಶೆಟ್ಟಿ ಹುಟ್ಟಿಬಂದ. ಎಂಥ ಅದ್ಭುತ ಕೊಡುಗೆ ಈತ ಕನ್ನಡ ಚಿತ್ರರಂಗಕ್ಕೆ ಎಂದು ಬರೆದುಕೊಂಡಿದ್ದಾರೆ.

ಕಾಂತಾರ ಬಿಡುಗಡೆ ದಿನವೇ ಜಗ್ಗೇಶ್‌ ಅವರ ‘ತೋತಾಪುರಿ’ಚಿತ್ರ ಬಿಡುಗಡೆಯಾಗಿತ್ತು. ಆಗ ಕಾಂತಾರಕ್ಕೆ ಹೆಚ್ಚು ರೇಟಿಂಗ್‌ ನೀಡಿರುವ ಕುರಿತು ಜಗ್ಗೇಶ್‌ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದರು. ಸಾಕಷ್ಟು ಜನ ಜಗ್ಗೇಶ್‌ ಅವರನ್ನು ಟ್ರೋಲ್‌ ಮಾಡಿದ್ದರು.

ದೇಶದೆಲ್ಲೆಡೆ ಅತ್ಯುತ್ತಮ ಪ್ರದರ್ಶನ ಕಾಣುತ್ತಿರುವ ಕಾಂತಾರ ₹100 ಕೋಟಿ ಕ್ಲಬ್‌ ಸೇರಿದೆ. ತೆಲುಗು ಹಾಗೂ ಹಿಂದಿ ವಲಯದಲ್ಲಿ ಅತ್ಯುತ್ತಮ ಗಳಿಕೆ ಕಾಣುತ್ತಿದೆ. ಕನ್ನಡದಲ್ಲಿ 4ನೇ ವಾರವೂ ಚಿತ್ರ ಹೌಸ್‌ಫುಲ್‌ ಪ್ರದರ್ಶನ ಕಾಣುತ್ತಿದೆ.

‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ರಿಷಬ್‌ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಹೊಂಬಾಳೆ ಫಿಲಂಸ್‌ ಚಿತ್ರವನ್ನು ನಿರ್ಮಿಸಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT