ಕೊಚ್ಚಿ: ಮದ್ಯದ ಅಮಲಿನಲ್ಲಿ ಪೊಲೀಸ್ ಠಾಣೆಯಲ್ಲಿ ಗದ್ದಲ ಎಬ್ಬಿಸಿದ ಆರೋಪದಲ್ಲಿ ಜೈಲರ್ ಸಿನಿಮಾದ ಖಳನಾಯಕ, ನಟ ವಿನಾಯಕನ್ ಅವರನ್ನು ಬಂಧಿಸಿ ಬಳಿಕ ಜಾಮೀನು ಮೇಲೆ ಬಿಡುಗಡೆಗೊಳಿಸಿದ ಘಟನೆ ಎರ್ನಾಕುಳಂ ಟೌನ್ ನಾರ್ತ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿ ಜತೆಗಿನ ವಿವಾದ ಇತ್ಯರ್ಥಗೊಳಿಸಲು ವಿನಾಯಕನ್ ಅವರನ್ನು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ್ದಕ್ಕಾಗಿ ನಟ ವಿನಾಯಕನ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ನಂತರ ನಟ ವಿನಾಯಕನ್ ಅವರನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು.
ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ವರದಿಗಾರರೊಂದಿಗೆ ಪ್ರತಿಕ್ರಿಯಿಸಿದ ವಿನಾಯಕನ್, ತನ್ನನ್ನು ಏಕೆ ಬಂಧಿಸಲಾಯಿತು ಎಂಬುದು ನನಗೆ ಗೊತ್ತಿಲ್ಲ. ನಾನು ಇಲ್ಲಿಗೆ ದೂರು ನೀಡಲು ಬಂದಿದ್ದೆ. ಆದರೆ ನನ್ನನ್ನು ಬಂಧಿಸಿ ಆಸ್ಪತ್ರೆಗೆ ಏಕೆ ಕರೆದೊಯ್ಯಲಾಯಿತು ಎಂಬುದನ್ನು ಪೊಲೀಸರನ್ನೇ ಕೇಳಿ ಎಂದು ಹೇಳಿದ್ದಾರೆ.