ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೆಪ್ಟೆಂಬರ್‌ನಲ್ಲಿ ಬರಲಿದೆ ‘ಜಂಬೂ ಸರ್ಕಸ್‌’

Published 24 ಆಗಸ್ಟ್ 2024, 0:02 IST
Last Updated 24 ಆಗಸ್ಟ್ 2024, 0:02 IST
ಅಕ್ಷರ ಗಾತ್ರ

‘ಒಡೆಯ’ ಸಿನಿಮಾ ಬಳಿಕ ಗ್ಯಾಪ್‌ ತೆಗೆದುಕೊಂಡಿದ್ದ ನಿರ್ದೇಶಕ ಎಂ.ಡಿ.ಶ್ರೀಧರ್‌ ‘ಜಂಬೂ ಸರ್ಕಸ್‌’ ಎಂಬ ಹೊಸ ಸಿನಿಮಾದೊಂದಿಗೆ ಪ್ರೇಕ್ಷಕರೆದುರಿಗೆ ಬರಲಿದ್ದಾರೆ. ಪ್ರವೀಣ್‌ ತೇಜ್‌–ಅಂಜಲಿ ಎಸ್‌.ಅನೀಶ್‌ ಜೋಡಿಯಾಗಿ ನಟಿಸಿರುವ ಈ ಸಿನಿಮಾದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಯಿತು. 

‘ಮನಸೋತೆ ಮನಸಾರೆ..’ ಎಂಬ ಹಾಡಿಗೆ ಕವಿರಾಜ್ ಅವರ ಗೀತ ಸಾಹಿತ್ಯವಿದ್ದು ನಕುಲ್‌ ಅಭಯಂಕರ ಹಾಡಿದ್ದಾರೆ. ಈ ಹಾಡಿಗೆ ವಾಸುಕಿ ವೈಭವ ಸಂಗೀತ ಸಂಯೋಜನೆ ಮಾಡಿದ್ದಾರೆ. ಶ್ರೀಧರ್‌ ಹಾಗೂ ಪ್ರವೀಣ್‌ ತೇಜ್‌ ಕಾಂಬಿನೇಷನ್‌ನ ಎರಡನೇ ಸಿನಿಮಾವಿದು. ‘ಪದವಿಪೂರ್ವ’ ಸಿನಿಮಾ ಬಳಿಕ ಅಂಜಲಿ ನಟಿಸುತ್ತಿರುವ ಎರಡನೇ ಸಿನಿಮಾವಿದು. ‘ಇದು ಗೆಳೆಯರಿಬ್ಬರ ಕಥೆ. ಒಂದೇ ಶಾಲೆ, ಕಾಲೇಜಿನಲ್ಲಿ ಓದಿ, ಒಂದೇ ಮಂಟಪದಲ್ಲಿ ಒಂದೇ ದಿನ ಮದುವೆ ಆಗುತ್ತಾರೆ. ಒಂದೇ ಏರಿಯಾದಲ್ಲಿ ಎದುರು ಬದುರು ಮನೆ ಮಾಡುತ್ತಾರೆ. ಕೊನೆಗೆ ಅವರಿಗೆ ಒಂದೇ ದಿನ ಮಕ್ಕಳೂ ಆಗುತ್ತವೆ. ಇವರ ಗೆಳೆತನ ಅವರ ಹೆಂಡತಿಯರಿಗೆ ಇಷ್ಟವಿರುವುದಿಲ್ಲ. ಹಾಗಾಗಿ ಮಕ್ಕಳನ್ನು ವೈರಿಗಳಂತೆ ಬೆಳೆಸುತ್ತಾರೆ. ದಾಯಾದಿಗಳಂತೆ ಬೆಳೆದ ನಾಯಕ-ನಾಯಕಿ ಮುಂದೆ ಏನೆಲ್ಲಾ ಮಾಡುತ್ತಾರೆ, ಅವರಿಬ್ಬರ ನಡುವೆ ಏನೆಲ್ಲಾ ನಡೆಯುತ್ತದೆ ಎಂಬುದೇ ಈ ಚಿತ್ರದ ಕಥೆ. ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದ್ದು ಸೆ‍ಪ್ಟೆಂಬರ್‌ನಲ್ಲಿ ತೆರೆಗೆ ಬರಲಿದೆ’ ಎಂದರು ಶ್ರೀಧರ್‌. 

ಶ್ರೀ ಮಹತಿ ಕಂಬೈನ್ಸ್‌ನಡಿ ‘ಜಂಬೂ ಸರ್ಕಸ್‌’ ಸಿನಿಮಾವನ್ನು ಎಚ್. ಸಿ. ಸುರೇಶ್‌ ನಿರ್ಮಾಣ ಮಾಡಿದ್ದಾರೆ. ರವಿ ವರ್ಮಾ ಸಾಹಸ ನಿರ್ದೇಶನ, ಎ. ಹರ್ಷ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಜಯಂತ ಕಾಯ್ಕಿಣಿ, ನಾಗೇಂದ್ರ ಪ್ರಸಾದ್, ಕವಿರಾಜ್ ಅವರ ಗೀತ ಸಾಹಿತ್ಯ ಚಿತ್ರದ ಹಾಡುಗಳಿಗಿವೆ. ಮೋಹನ್ ಬಿ. ಕೆರೆ ಕಲಾ ನಿರ್ದೇಶನ, ಜ್ಞಾನೇಶ ಸಂಕಲನ ಸಿನಿಮಾಗಿದೆ. ಅವಿನಾಶ್, ಅಚ್ಯುತ್‌ ಕುಮಾರ್, ರವಿಶಂಕರ್ ಗೌಡ, ಆಶಾಲತ, ಲಕ್ಷ್ಮಿ ಸಿದ್ದಯ್ಯ, ನಯನ ಶರತ್, ಜಗಪ್ಪ ಮತ್ತಿತರರು ತಾರಾಬಳಗದಲ್ಲಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT