ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಸಿನಿಮಾ ಜ. 9ರಂದು ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಜ.3ರಂದು ಚಿತ್ರತಂಡ ಟ್ರೇಲರ್ ಅನ್ನು ಬಿಡುಗಡೆ ಮಾಡಿತ್ತು. ಪ್ರಪಂಚದಾದ್ಯಂತ ಪ್ರೇಕ್ಷಕರು ಟ್ರೇಲರ್ ನೋಡಿ ಅದ್ಭುತ ಪ್ರತಿಕ್ರಿಯೆ ನೀಡಿದ್ದಾರೆ.

ಜನ ನಾಯಗನ್ ಟ್ರೇಲರ್ ಬಿಡುಗಡೆಯಾದ 48 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಬರೋಬ್ಬರಿ 37 ಮಿಲಿಯನ್ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಆದರೆ ಜನ ನಾಯಗನ್ ಟ್ರೇಲರ್ ಬಿಡುಗಡೆಯ ನಂತರ ಚರ್ಚೆಯನ್ನು ಹುಟ್ಟುಹಾಕಿದೆ. ಟ್ರೇಲರ್ನಲ್ಲಿ ಜೆಮಿನಿ ಎಐ ಲೋಗೊ ಬಳಕೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊಗಳು ಹರಿದಾಡುತ್ತಿವೆ.

ಜನ ನಾಯಗನ್ ಸಿನಿಮಾದ ಟ್ರೇಲರ್ ವೀಕ್ಷಿಸಿದ ಬಳಿಕ, ಒಂದು ದೃಶ್ಯದಲ್ಲಿ ಜೆಮಿನಿ ಎಐ ಬಳಸಿ ರಚಿಸಲಾಗಿದೆ. ಆದರೆ ಟ್ರೇಲರ್ನಲ್ಲಿ ಜೆಮಿನಿ ಎಐ ಲೋಗೊ ಕಾಣಿಸಿದ್ದು, ಇದು ಸಿನಿಮಾ ಮೇಲೆ ಹುಟ್ಟು ಹಾಕಿದ್ದ ನಿರೀಕ್ಷೆ ಹುಸಿಯಾಗಿದೆ ಎಂದು ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಬೇಸರ ಹೊರಹಾಕುತ್ತಿದ್ದಾರೆ. ಆದರೆ ಈ ಬಗ್ಗೆ ಪ್ರೊಡಕ್ಷನ್ ಸಂಸ್ಥೆಯಾಗಲಿ, ಚಿತ್ರತಂಡವಾಗಲಿ ಯಾವುದೇ ಸ್ಪಷ್ಟನೆ ನೀಡಿಲ್ಲ.
.ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ.ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಆಡಿಯೊ ಬಿಡುಗಡೆ: ದಿನಾಂಕ ನಿಗದಿ.
ವೆಂಕಟ್ ಕೆ.ನಾರಾಯಣ ನಿರ್ಮಾಣದ ಈ ದೊಡ್ಡ ಬಜೆಟ್ ಚಿತ್ರವನ್ನು ಎಚ್. ವಿನೋತ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ, ಸತ್ಯನ್ ಸೂರ್ಯನ್ ಛಾಯಾಚಿತ್ರಗ್ರಹಣ, ಆನ್ಲ್ ಅರಸು ಸಾಹಸ, ಪ್ರದೀಪ್ ಇ. ರಾಘವ ಸಂಕಲನ, ಶೇಖರ್ ವಿ.ಜಿ., ಸುಧನ್ ನೃತ್ಯ ನಿರ್ದೇಶನವಿದೆ. ದಳಪತಿ ವಿಜಯ್ ನಟನೆಯ 69ನೇ ಚಿತ್ರ ಇದಾಗಿದ್ದು, 2026ರ ಜನವರಿ 9ರಂದು ಚಿತ್ರ ತೆರೆಗೆ ಬರಲಿದೆ.

ಈ ಸಿನಿಮಾದಲ್ಲಿ ನಟ ವಿಜಯ್, ಖದರ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ನಟ ವಿಜಯ್ ಅವರ 51ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಚಿತ್ರತಂಡ ಸಿನಿಮಾದ ಫಸ್ಟ್ಲುಕ್ ಬಿಡುಗಡೆ ಮಾಡಿತ್ತು. ಜನ ನಾಯಗನ್ ಚಿತ್ರದ ಫಸ್ಟ್ ಲುಕ್ಗೆ ಉತ್ತಮ ಪ್ರತಿಕ್ರಿಯೆ ಕೂಡ ದೊರಕಿತ್ತು. ವಿಜಯ್ ಅವರು, ಸಿನಿಮಾಗಿಂತಲೂ ರಾಜಕೀಯದ ಕಡೆ ಹೆಚ್ಚಾಗಿ ಗಮನ ಹರಿಸುತ್ತಿದ್ದು, ತಮ್ಮದೇ ಹೊಸ ಪಕ್ಷದ ಕೆಲಸ ಕಾರ್ಯದಲ್ಲಿ ತೊಡಗಿದ್ದಾರೆ. ಇದು ಇವರ ಕೊನೆಯ ಚಿತ್ರವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.