ನವದೆಹಲಿ: ನಟ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡುವ ಕುರಿತು ಮದ್ರಾಸ್ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿ ದೀಪಾಂಕರ್ ದತ್ತಾ, ಎ.ಜಿ.ಮಸಿಹ್ ನೇತೃತ್ವದ ನ್ಯಾಯಪೀಠವು, ಈ ವಿಚಾರವನ್ನು ಜನವರಿ 20ರೊಳಗೆ ಇತ್ಯರ್ಥಪಡಿಸುವಂತೆ ಮದ್ರಾಸ್ ಹೈಕೋರ್ಟ್ಗೆ ನಿರ್ದೇಶನ ನೀಡಿದೆ.

‘ಜನ ನಾಯಗನ್’ ಸಿನಿಮಾಕ್ಕೆ ತಕ್ಷಣ ಸೆನ್ಸಾರ್ ಪ್ರಮಾಣಪತ್ರ ನೀಡಬೇಕು ಎಂದು ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (ಸಿಬಿಎಫ್ಸಿ) ಏಕಸದಸ್ಯ ಪೀಠ ನಿರ್ದೇಶನ ನೀಡಿತ್ತು. ಈ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ ಜನವರಿ 9ರಂದು ತಡೆ ನೀಡಿತ್ತು.

ಇದನ್ನು ಪ್ರಶ್ನಿಸಿ ಕೆವಿಎನ್ ಪ್ರೊಡಕ್ಷನ್ಸ್ ಎಲ್ಎಲ್ಪಿ ಸಂಸ್ಥೆ ಸುಪ್ರೀಂ ಕೋರ್ಟ್ಗೆ ಸೋಮವಾರ ಮೇಲ್ಮನವಿ ಸಲ್ಲಿಸಿತ್ತು.

ಸಿನಿಮಾ ಬಿಡುಗಡೆಗೆ ಜನವರಿ 9ರಂದು ದಿನ ನಿಗದಿಯಾಗಿತ್ತು. ಆದರೆ, ಪ್ರಮಾಣಪತ್ರ ಸಿಗದ ಕಾರಣ ಸಿನಿಮಾ ಬಿಡುಗಡೆ ವಿಳಂಬಗೊಂಡಿದೆ. ರಾಜಕೀಯ ಪ್ರವೇಶಿಸಿರುವ ವಿಜಯ್ ಅವರ ಕೊನೆಯ ಸಿನಿಮಾ ಎಂದು ಹೇಳಲಾಗುತ್ತಿರುವ ಕಾರಣ ಈ ಸಿನಿಮಾ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.
.ವಿಜಯ್ ನಟನೆಯ ‘ಜನ ನಾಯಗನ್’ಗೆ ರಾಹುಲ್ ಬೆಂಬಲ: ‘ಕೈ’, TVK, ಬಿಜೆಪಿ ಹೇಳಿದ್ದೇನು?.Actor Vijay New movie | ‘ಜನ ನಾಯಗನ್’ ಟಿಕೆಟ್ ಬೆಲೆ ₹2000! .‘ಜನ ನಾಯಗನ್‘ ಸೆನ್ಸಾರ್ ಪ್ರಮಾಣಪತ್ರಕ್ಕೆ ತಡೆ: ಸುಪ್ರೀಂ ಮೆಟ್ಟಿಲೇರಿದ ನಿರ್ಮಾಪಕ.'ಜನ ನಾಯಗನ್’ ಚಿತ್ರದಲ್ಲಿ ವಿಜಯ್ ಸೇರಿ ಇತರ ಕಲಾವಿದರು ಪಡೆದ ಸಂಭಾವನೆ ಎಷ್ಟು? .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.