ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಲಜ್‌ ಚಿತ್ರ ಬಿಡುಗಡೆ ದಿನಾಂಕ ಘೋಷಣೆ: IFS ಅಧಿಕಾರಿಯಾಗಿ ನಟಿ ಜಾಹ್ನವಿ ಕಪೂರ್‌

Published 25 ಜೂನ್ 2024, 11:35 IST
Last Updated 25 ಜೂನ್ 2024, 11:35 IST
ಅಕ್ಷರ ಗಾತ್ರ

ಮುಂಬೈ: ನಟಿ ಜಾಹ್ನವಿ ಕಪೂರ್‌ ಅಭಿನಯದ ‘ಉಲಜ್‌‘ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಇದೇ ಆಗಸ್ಟ್‌ 2ರಂದು ತೆರೆ ಮೇಲೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಹಿಂದೆ ಜುಲೈ 5ರಂದು ಚಿತ್ರ ಬಿಡುಗಡೆಯ ದಿನಾಂಕ ನಿಗದಿಯಾಗಿತ್ತು. ಆದರೆ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್ ಕೆಲಸಗಳು ಬಾಕಿ ಇರುವುದರಿಂದ ಚಿತ್ರ ಬಿಡುಗಡೆಯನ್ನು ಮುಂದೂಡಲಾಗಿದೆ ಎನ್ನಲಾಗಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸುಧಾಂಶು ಸರಿಯಾ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ದೇಶಭಕ್ತಿ ಹಾಗೂ ಥ್ರಿಲ್ಲರ್‌ ಕಥಾ‌ಹಂದರ ಹೊಂದಿರುವ ಈ ಚಿತ್ರದಲ್ಲಿ ನಟಿ ಜಾಹ್ನವಿ ಕಪೂರ್‌ ಐಎಫ್‌ಎಸ್‌ (ಭಾರತೀಯ ವಿದೇಶಾಂಗ ಸೇವೆ) ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ದೇಶಭಕ್ತ ಕುಟುಂಬದಲ್ಲಿ ಜನಿಸಿದ ಮಹಿಳೆಯು ಐಎಫ್‌ಎಸ್‌ ಅಧಿಕಾರಿಯಾಗಿ ವಿದೇಶದಲ್ಲಿ ಕೆಲಸ ನಿರ್ವಹಿಸುವ ವೇಳೆ ಎದುರಾಗುವ ಸಮಸ್ಯೆಗಳು ಹಾಗೂ ಅದನ್ನು ಮೆಟ್ಟಿ ನಿಲ್ಲುವ ಆಕೆಯ ಧೈರ್ಯ ಈ ಎಲ್ಲಾ ಅಂಶಗಳನ್ನು ಚಿತ್ರದಲ್ಲಿ ಕಾಣಬಹುದಾಗಿದೆ.

ಗುಲ್ಶನ್ ದೇವಯ್ಯ ಹಾಗೂ ರೋಷನ್ ಮ್ಯಾಥ್ಯೂ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆದಿಲ್ ಹುಸೇನ್, ರಾಜೇಶ್ ತೈಲಂಗ್, ಮೇಯಾಂಗ್ ಚಾಂಗ್, ರಾಜೇಂದ್ರ ಗುಪ್ತಾ ಹಾಗೂ ಜಿತೇಂದ್ರ ಜೋಶಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಿಂದಿ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

'ದೇವರ: ಭಾಗ 1' ಚಿತ್ರದಲ್ಲಿ ನಟ ಜೂನಿಯರ್‌ ಎನ್‌ಟಿಆರ್‌ಗೆ ಜೋಡಿಯಾಗಿ ಜಾಹ್ನವಿ ಕಾಣಿಸಿಕೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT