ಪ್ರಭಾಸ್– ಶ್ರದ್ಧಾ ಕಪೂರ್ ಅಭಿನಯದ ಸಾಹೋ ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಐಟಂ ಸಾಂಗ್‌ವೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ. ಈ ಮೂಲಕ ಬಹು ತಾರಾಗಣದ ಆ್ಯಕ್ಷನ್ ಥ್ರಿಲ್ಲರ್ ಚಿತ್ರ ಸಾಹೋಗೆ ಮತ್ತೊಬ್ಬ ಸ್ಟಾರ್ ನಟಿ ಸೇರಿಕೊಂಡಿದ್ದಾರೆ.

ಸಾಹೋ ಮೆಗಾ ಬಜೆಟ್ ಚಿತ್ರವಾಗಿದ್ದು, ಸುಮಾರು ₹300 ಕೋಟಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿದೆ. ಭಾರತದ ಅತಿ ಹೆಚ್ಚು ಬಜೆಟ್ ಆ್ಯಕ್ಷನ್ ಚಿತ್ರ ಎಂಬ ದಾಖಲೆ ಈ ಚಿತ್ರದ್ದು. ಈ ಚಿತ್ರದಲ್ಲಿ ಬಾಲಿವುಡ್ ಹಾಗೂ ಕಾಲಿವುಡ್‌ನ ಅನೇಕ ನಟ,ನಟಿಯರು ಅತಿಥಿ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ಮತ್ತೊಬ್ಬ ಸುಂದರಿ ಹಾಗೂ ಬಾಲಿವುಡ್‌ನ ಖ್ಯಾತ ನಟಿ ಜಾಕ್ವೆಲಿನ್ ಈ ಚಿತ್ರದ ಭಾಗವಾಗಿದ್ದಾರೆ.

ಸಾಹೋದ ವಿಶೇಷ ಹಾಡು ಇದು. ಇದೇ ಚಿತ್ರದ ಹೈಲೈಟ್ ಕೂಡ. ಅದರಲ್ಲಿ ಜಾಕ್ವೆಲಿನ್ ಅವರು ಅತಿಥಿ ಪಾತ್ರದಲ್ಲಿ ನಟಿಸುವಂತೆ ಚಿತ್ರತಂಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತ್ತು. ಈಗಾಗಲೇ ಈ ಹಾಡಿನ ಚಿತ್ರೀಕರಣ ಮುಗಿದಿದ್ದು, ಪ್ರಭಾಸ್ ಜೊತೆ ಜಾಕ್ವೆಲಿನ್ ಹೆಜ್ಜೆ ಹಾಕಿದ್ದಾಳೆ ಎಂದು ಸಿನಿಮಾ ಮೂಲಗಳು ತಿಳಿಸಿವೆ.

ಈ ಚಿತ್ರದ ಚಿತ್ರೀಕರಣ ಕೆಲಸಗಳು ಅಂತಿಮ ಹಂತದಲ್ಲಿದ್ದು, ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ ಎಂದು ಇತ್ತೀಚೆಗೆ ಚಿತ್ರತಂಡ ಹೇಳಿಕೊಂಡಿತ್ತು. ಜಾಕ್ವೆಲಿನ್ ಸದ್ಯ ಸುಶಾಂತ್ ಸಿಂಗ್ ರಜಪೂತ್ ಅವರ ಡ್ರೈವ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.