ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿಮಲೆ: ಅಯ್ಯಪ್ಪ ಮಾಲಾಧಾರಿಯಾಗಿರುವ ನಟ ಅಜಯ್‌ ದೇವಗನ್‌

Last Updated 13 ಜನವರಿ 2022, 11:35 IST
ಅಕ್ಷರ ಗಾತ್ರ

ಬಾಲಿವುಡ್ ನಟ ಅಜಯ್ ದೇವಗನ್ ಶಬರಿಮಲೆ ಯಾತ್ರೆ ಕೈಗೊಂಡಿದ್ದು ಅವರು ಮಾಲಾಧಾರಿಯಾಗಿರುವ ಚಿತ್ರಗಳು ಇಂಟರ್ನೆಟ್‌ನಲ್ಲಿ ಹರಿದಾಡುತ್ತಿವೆ.

ಯಾತ್ರಗೂ ಮುನ್ನ ಕಡ್ಡಾಯವಾಗಿ ಪಾಲಿಸಬೇಕಾಗಿರುವ ನಿಯಮಗಳನ್ನು ಅಜಯ್ ಪಾಲಿಸಿದ್ದಾರೆ. ಅವರು 41 ದಿನಗಳ ವ್ರತವನ್ನೂ ಪೂರೈಸಿದ್ದು, ಇದೀಗ ದೇವಸ್ಥಾನಕ್ಕೆ ತೆರಳಿದ್ದಾರೆ ಎಂದು ವರದಿಗಳು ಹೇಳಿವೆ.

ಇತ್ತೀಚೆಗೆ ಮುಂಬೈನಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ತೊಡುವ ಕಪ್ಪು ಬಣ್ಣದ ದಿರಿಸಿನಲ್ಲೇ ಅಜಯ್ ಕಾಣಿಸಿಕೊಂಡಿದ್ದರು.

ದಕ್ಷಿಣ ಭಾರತದಲ್ಲಿ ಭಕ್ತರು ಹೆಚ್ಚಾಗಿ ಮಾಲಾಧಾರಿಯಾಗಿ ಶಬರಿಮಲೆ ಯಾತ್ರೆಗೆ ಹೋಗುತ್ತಾರೆ. ಕನ್ನಡದ ನಟ ರಾಜ್‌ಕುಮಾರ್‌ ಸೇರಿದಂತೆ ಖ್ಯಾತ ತಾರೆಯರು ಕೂಡ ವ್ರತಾಚರಣೆ ಮಾಡಿದ್ದಾರೆ.

ಸದ್ಯ ಅಜಯ್‌ ದೇವಗನ್‌ ರಾಜಮೌಳಿ ನಿರ್ದೇಶನದ ‘ಆರ್​ಆರ್​​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಬಾಲಿವುಡ್‌ನ ‘ಗಂಗೂಬಾಯಿ ಕಾಠಿಯಾವಾಡಿ’, ‘ರನ್​ವೇ 34’, ‘ಮೈದಾನ್’, ‘ಸರ್ಕಸ್’, ‘ಥ್ಯಾಂಕ್ ಗಾಡ್’ ಚಿತ್ರಗಳು ಅವರ ಕೈಯಲ್ಲಿ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT