ಬುಧವಾರ, ನವೆಂಬರ್ 25, 2020
24 °C

ಜೆಕೆ ಈಗ ‘ಐರಾವನ್’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಜ್ಯದಲ್ಲಿ ಕೊರೊನಾ ಆರ್ಭಟ ತಗ್ಗುತ್ತಿರುವ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಚಟುವಟಿಕೆಗಳು ಗರಿಗೆದರುತ್ತಿವೆ. ಒಂದರಿಂದೊಂದು ಹೊಸ ಚಿತ್ರಗಳು ಸ್ಯಾಂಡಲ್‌ವುಡ್ ಅಂಗಳದಲ್ಲಿ ಸೆಟ್ಟೇರಲಾರಂಭಿಸಿವೆ. ನಟ ಜೆ.ಕೆ (ಜಯರಾಂ ಕಾರ್ತಿಕ್) ನಾಯಕನಾಗಿ ನಟಿಸುತ್ತಿರುವ ‘ಐರಾವನ್’ ಚಿತ್ರದ ಮುಹೂರ್ತ ಇತ್ತೀಚೆಗೆ ಗವಿಪುರಂನ ಕಾಲಭೈರವೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಚಿತ್ರದ ಮೊದಲ ದೃಶ್ಯಕ್ಕೆ ನಿರಂತರ ಗಣೇಶ್ ಆರಂಭ ಫಲಕ ತೋರಿದರು. ತುಮಕೂರಿನ ಸಾಗರ ಸ್ವಾಮೀಜಿ ಕ್ಯಾಮೆರಾ ಚಾಲನೆ ನೀಡಿದರು.

ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಕಥೆಯ ಈ ಚಿತ್ರದಲ್ಲಿ ಜೆ.ಕೆ. ಅವರಿಗೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಬಣ್ಣ ಹಚ್ಚುತ್ತಿದ್ದಾರೆ. ಅವಿನಾಶ್, ಕೃಷ್ಣ ಹೆಬ್ಬಾರ್ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಲಿದ್ದಾರೆ.

ರಾಮ್ಸ್ ರಂಗಾ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹಲವು ಚಿತ್ರಗಳಿಗೆ ಸಹ ಹಾಗೂ ಸಹಾಯಕ ನಿರ್ದೇಶಕರಾಗಿ ದುಡಿದಿರುವ ರಾಮ್ಸ್ ರಂಗಾ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಲು ಯೋಜನೆ ರೂಪಿಸಿದ್ದಾರೆ.

ದೇವೇಂದ್ರ ಛಾಯಾಗ್ರಹಣ, ಎಸ್.ಪ್ರದೀಪ್ ವರ್ಮ ಸಂಗೀತ ನಿರ್ದೇಶನ, ಕೆ.ಎಂ. ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನವಿದೆ. ನಿರಂತರ ಗಣೇಶ್ ತಮ್ಮ ನಿರಂತರ ಪ್ರೊಡಕ್ಷನ್ಸ್ ಮೂಲಕ ಈ ಚಿತ್ ನಿರ್ಮಿಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು