ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸ್ಥಾಪಕರಾದ ಜೋಸೆಫ್ ವಿಜಯ್ ಅವರು ಇಂದು (ಭಾನುವಾರ) ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ಸಾರ್ವತ್ರಿಕ ಚುನಾವಣೆಯಲ್ಲಿ ಡಿಎಂಕೆ ಹಾಗೂ ಎಐಡಿಎಂಕೆ ಪಕ್ಷಗಳನ್ನು ಸೋಲಿಸಿ ಟಿವಿಕೆಯನ್ನು ಅಧಿಕಾರಕ್ಕೆ ತಂದಿದ್ದಾರೆ.

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ತ್ರಿಶಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಪ್ರಮಾಣವಚನ ಕಾರ್ಯಕ್ರಮದಲ್ಲಿ ವಿಜಯ್ ಅವರು ತಮಿಳುನಾಡಿನ ಸಂಪ್ರದಾಯವೊಂದನ್ನು ಮುರಿದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.

ಹೌದು, ದಳಪತಿ ವಿಜಯ್ ಅವರು ಧರಿಸಿದ್ದ ಬಟ್ಟೆ ಈಗ ಗಮನಸೆಳೆಯುತ್ತಿದೆ. ಸಾಮಾನ್ಯವಾಗಿ ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವವರು, ಅಲ್ಲಿನ ಸ್ಥಳೀಯ ಸಂಸ್ಕೃತಿಯನ್ನು ಬಿಂಬಿಸುವ ಧೋತಿ ಹಾಗೂ ಬಿಳಿ ಬಣ್ಣದ ಶರ್ಟ್ ಧರಿಸುತ್ತಿದ್ದರು. ಆದರೆ, ದಳಪತಿ ವಿಜಯ್ ಅವರು ಬಿಳಿ ಶರ್ಟ್, ಕಪ್ಪು ಬಣ್ಣದ ಸೂಟ್ ಹಾಗೂ ಕಪ್ಪು ಪ್ಯಾಂಟ್ ಧರಿಸಿದ್ದರು. ಇವರ ಜೊತೆಗೆ ಅಧಿಕಾರ ಸ್ವೀಕರಿಸಿದ ಬಹುತೇಕ ಸಚಿವರು ಇದೇ ಮಾದರಿಯನ್ನು ಅನುಸರಿಸಿರುವುದು ವಿಶೇಷ.

ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವವರು ಸೂಟ್ ಧರಿಸಿದ್ದಾರೆ. ಇಲ್ಲಿನ ಸಂಪ್ರದಾಯದ ಪ್ರಕಾರ, ಪ್ರಮಾಣವಚನ ಸ್ವೀಕರಿಸುವಾಗ ಬಿಳಿ ಧೋತಿ ಹಾಗೂ ಶರ್ಟ್ ಧರಿಸುವುದು ಹಿಂದಿನಿಂದಲೂ ರೂಢಿಸಿಕೊಂಡು ಬರಲಾಗಿದೆ. ಮಹಿಳಾ ಮುಖ್ಯಮಂತ್ರಿಗಳು ಸೀರೆ ಉಟ್ಟು ಪ್ರಮಾಣವಚನ ಸ್ವೀಕರಿಸುವುದು ವಾಡಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.