ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜೊತೆಯಲೇ ಇರಲೇ’ ಎಂದ ಜಾಯ್‌

Published 12 ಫೆಬ್ರುವರಿ 2024, 23:23 IST
Last Updated 12 ಫೆಬ್ರುವರಿ 2024, 23:23 IST
ಅಕ್ಷರ ಗಾತ್ರ

ಈ ಹಿಂದೆ ಜೆ.ಜೆ. ಮೂವೀಸ್ ಬ್ಯಾನರ್ ಮೂಲಕ ‘ನಾನೊಂಥರಾ’ ಎಂಬ ಸಿನಿಮಾ ನಿರ್ಮಿಸಿದ್ದ ಜಾಕ್ವೆಲಿನ್ ಫ್ರಾನ್ಸಿಸ್ ಇದೀಗ ತಮ್ಮ‌ ಪುತ್ರನನ್ನು ಕನ್ನಡ ಚಿತ್ರರಂಗಕ್ಕೆ ನಾಯಕನಾಗಿ ಪರಿಚಯಿಸುತ್ತಿದ್ದಾರೆ.

ಇನ್ನೂ ಹೆಸರಿಡದ ಈ ಚಿತ್ರದಲ್ಲಿ ಜಾಯ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಸ್ನಿಗ್ಧಾ ಶೆಟ್ಟಿ ಅವರಿಗೆ ಜೋಡಿಯಾಗಿದ್ದಾರೆ. ಆರ್ಯನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಚಿತ್ರದ ‘ಜೊತೆಯಲೇ ಇರಲೇ’ ಎಂಬ ರೊಮ್ಯಾಂಟಿಕ್ ವೀಡಿಯೊ ಹಾಡು ಇತ್ತೀಚೆಗೆ ಬಿಡುಗಡೆಗೊಂಡಿತು.

‘ಇದೊಂದು ರೊಮ್ಯಾಂಟಿಕ್ ಯೂತ್‌ಫುಲ್‌ ಜಾನರ್‌ನ ಸಿನಿಮಾ. ನಾನು ಈ ಹಿಂದೆ ‘ಕಿಲ್ಲಿಂಗ್ ವೀರಪ್ಪನ್’ ಸೇರಿದಂತೆ ಒಂದಷ್ಟು ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಮಾರ್ಚ್‌ ಅಂತ್ಯದಿಂದ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಗೋವಾ, ಶಿರಸಿ, ಹೊನ್ನಾವರ, ಗೋಕರ್ಣ ಸುತ್ತಮುತ್ತ ಚಿತ್ರೀಕರಣ ನಡೆಸಲಿದ್ದೇವೆ. ಡಿಸೆಂಬರ್ ವೇಳೆಗೆ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆ ಇದೆ’ ಎನ್ನುತ್ತಾರೆ ಆರ್ಯನ್‌. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT