ಮಂಗಳವಾರ, ಮೇ 24, 2022
31 °C

ವಿವಾಹ ವಾರ್ಷಿಕೋತ್ಸವ: ಎನ್‌ಟಿಆರ್‌–ಪ್ರಶಾಂತ್‌ ನೀಲ್‌ ದಂಪತಿಗಳ ಸಂಭ್ರಮಾಚಣೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಹೈದರಾಬಾದ್: ಮೇ 5ರಂದು ಒಂದೇ ದಿನ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ನಟ ಜೂನಿಯರ್ ಎನ್‌ಟಿಆರ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರು ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಪತ್ನಿಯರೊಂದಿಗೆ ಒಟ್ಟಿಗೆ ಆಚರಿಸಿಕೊಂಡಿದ್ದಾರೆ. 

ಎನ್‌ಟಿಆರ್‌ ಅವರು ವಿವಾಹ ವಾರ್ಷಿಕೋತ್ಸವದ ಸಮಾರಂಭದ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಎನ್‌ಟಿಆರ್‌ಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳುವುದು ಬಹುತೇಕ ಖಚಿತವಾಗಿದೆ. ಇವರಿಬ್ಬರ ಕಾಂಬಿನೇಷನ್ ನೋಡಲು ಸಿನಿರಸಿಕರು ಕಾತುರದಿಂದ ಕಾಯುತ್ತಿದ್ದಾರೆ.

ಓದಿ... ರೆಹಮಾನ್ ಪುತ್ರಿ ಮದುವೆ ಸಂಭ್ರಮ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖತೀಜಾ–ರಿಯಾಸ್ದೀನ್

ಎಸ್‌.ಎಸ್‌.ರಾಜಮೌಳಿ ನಿರ್ದೇಶನದಲ್ಲಿ ತೆರೆಕಂಡ ‘ಆರ್‌ಆರ್‌ಆರ್‌’ ಚಿತ್ರದಲ್ಲಿ ಎನ್‌ಟಿಆರ್‌, ರಾಮ್ ಚರಣ್‌ ನಟಿಸಿದ್ದರು. ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡುವುದರ ಜತೆಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿತ್ತು. 

ಇತ್ತ ಪ್ರಶಾಂತ್ ನೀಲ್‌ ನಿರ್ದೇಶನ, ರಾಕಿಂಗ್ ಸ್ಟಾರ್ ಯಶ್‌ ಅಭಿನಯದ ‘ಕೆಜಿಎಫ್‌ –2’ ಇತ್ತೀಚೆಗೆ ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಬಾಕ್ಸ್‌ ಆಫೀಸ್‌ನಲ್ಲಿ ₹1000 ಕೋಟಿ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. 

ಪ್ರಶಾಂತ್ ನೀಲ್ ಸದ್ಯ ಪ್ರಭಾಸ್‌ ಅಭಿನಯದ ‘ಸಲಾರ್’ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದು ಪೂರ್ಣಗೊಂಡ ಬಳಿಕ ಎನ್‌ಟಿಆರ್ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆ. 

ಎನ್‌ಟಿಆರ್ ಪ್ರಸ್ತುತ ಕೊರಟರ ಶಿವ ನಿರ್ದೇಶನದ ಹೊಸ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. 
 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು