ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

39ನೇ ವಸಂತಕ್ಕೆ ಕಾಲಿಟ್ಟ ಜೂ.ಎನ್‌ಟಿಆರ್: ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

ಅಕ್ಷರ ಗಾತ್ರ

ಹೈದರಾಬಾದ್: ‌ತೆಲುಗು ನಟ ಜೂನಿಯರ್ ಎನ್‌ಟಿಆರ್ (ತಾರಕ್) ಅವರು ಇಂದು (ಶುಕ್ರವಾರ) 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಎನ್‌ಟಿಆರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿತ್ರರಂಗ ಗಣ್ಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

ಕೋವಿಡ್‌ ಕಾರಣದಿಂದಾಗಿ ಕಳೆದ ವರ್ಷ ಎನ್‌ಟಿಆರ್‌ ಹುಬ್ಬಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಆದರೆ, ಕೋವಿಡ್‌ ಆತಂಕ ದೂರವಾಗಿದ್ದು, ತಮ್ಮೊಂದಿಗೆ ನೆಚ್ಚಿನ ನಟ ಹುಟ್ಟಹಬ್ಬ ಆಚರಿಸಿಕೊಳ್ಳಲಿದ್ದಾರೆ ಎಂಬುದು ಅಭಿಮಾನಿಗಳ ನಿರೀಕ್ಷೆ.

ಎಸ್‌.ಎಸ್‌.ರಾಜಮೌಳಿ ನಿರ್ದೇಶನದಲ್ಲಿ ಮೂಡಿಬಂದ ‘ಆರ್‌ಆರ್‌ಆರ್‌’ ಸಿನಿಮಾ ಇತ್ತೀಚೆಗೆ ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ₹1,200 ಕೋಟಿ ಗಳಿಕೆ ಕಾಣುವ ಮೂಲಕ ಬಾಕ್ಸ್‌ ಆಫೀಸ್‌ನಲ್ಲಿ ಹೊಸ ದಾಖಲೆ ಬರೆದಿದೆ. ಈ ಚಿತ್ರದಲ್ಲಿ ಎನ್‌ಟಿಆರ್‌– ರಾಮ್ ಚರಣ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಕೊರಟಾಲ ಶಿವ ಆ್ಯಕ್ಷನ್ ಕಟ್‌ ಹೇಳಲಿರುವ ಹೊಸ ಚಿತ್ರದಲ್ಲಿ ಎನ್‌ಟಿಆರ್‌ ಅಭಿನಯಿಸಲಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಈ ಬಗ್ಗೆ ಅಧಿಕೃತ ಘೋಷಣೆಯಾಗಿದೆ. ಇದು ‘ಪ್ಯಾನ್ ಇಂಡಿಯಾ’ ಸಿನಿಮಾ ಆಗಿದ್ದು, ಅಭಿಮಾನಿಗಳಲ್ಲಿ ಹೆಚ್ಚು ನಿರೀಕ್ಷೆ ಮೂಡಿಸಿದೆ.

ಕನ್ನಡದ ಬಗ್ಗೆ ವಿಶೇಷ ಅಭಿಮಾನ ಹೊಂದಿರುವ ಎನ್‌ಟಿಆರ್‌, ಅವಕಾಶ ಸಿಕ್ಕಾಗಲೆಲ್ಲ ಕನ್ನಡದಲ್ಲೇ ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT