ಬಹುನಿರೀಕ್ಷಿತ ‘ಡ್ರ್ಯಾಗನ್’ ಚಿತ್ರಕ್ಕಾಗಿ ತೆಲುಗು ನಟ ಜೂನಿಯರ್ ಎನ್ಟಿಆರ್ ಅವರು ದೇಹದ ತೂಕ ಇಳಿಸಿಕೊಂಡಿದ್ದಾರೆ. ಆ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಚಿತ್ರದಲ್ಲಿ ನಟಿಸುತ್ತಿರುವ ಜೂನಿಯರ್ ಎನ್ಟಿಆರ್, ಈ ಚಿತ್ರಕ್ಕಾಗಿ ಕೇವಲ 50 ದಿನಗಳಲ್ಲಿ ಸುಮಾರು 9.5 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ ಎನ್ನಲಾಗಿದೆ.

ಎನ್ಟಿಆರ್ ಅವರು ದೇಹ ಸದೃಢಗೊಳಿಸಿ ಕೊಳ್ಳಲು ಜಿಮ್ನಲ್ಲಿ ಸಾಮು ಮಾಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದು, ಇದರಲ್ಲಿ ಅವರ ಸ್ನಾಯುಬದ್ಧ ತೋಳುಗಳನ್ನು ಕಾಣಬಹುದು. ‘ಪರಿಶ್ರಮದಿಂದ ಮಾಡಿಕೊಂಡಿರುವುದು.ಖರೀದಿಸಿದ್ದಲ್ಲ’ ಎಂಬ ಅಡಿಬರಹವನ್ನು ಅದಕ್ಕೆ ನೀಡಿದ್ದಾರೆ.

ಮುಂಬರುವ ಚಿತ್ರಕ್ಕಾಗಿ ಅವರು ತರಬೇತುದಾರ ಕುಮಾರ್ ಮನ್ನವ ಅವರ ಮಾರ್ಗದರ್ಶನದಲ್ಲಿ ವಿಶೇಷ ವ್ಯಾಯಾಮ ಮತ್ತು ಆಹಾರ ಪದ್ಧತಿಯನ್ನು ಅನುಸರಿಸಿದ್ದಾರೆ. ತೂಕ ಇಳಿಸಲು ಡಯಟ್ ಮೊರೆ ಹೋಗಿದ್ದಾರೆ ಎಂದು ‘ಎನ್ಡಿಟಿವಿ’ ವರದಿ ಮಾಡಿದೆ. ‘ಡ್ರ್ಯಾಗನ್’ ಆ್ಯಕ್ಷನ್ ಡ್ರಾಮಾ ಆಗಿದ್ದು, ಈ ಚಿತ್ರದಲ್ಲಿ ನಾಯಕಿಯಾಗಿ ರುಕ್ಮಿಣಿ ವಸಂತ್ ಹಾಗೂ ಪ್ರಮುಖ ಪಾತ್ರದಲ್ಲಿ ಅನಿಲ್ ಕಪೂರ್ ಅವರು ನಟಿಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-4-1110000635

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.