ದಕ್ಷಿಣ ಭಾರತದ ಪ್ರಸಿದ್ಧ ನಟ ಜ್ಯೂ. ಎನ್ಟಿಆರ್ ಅವರ ಜೊತೆ ತಮ್ಮ ಮುಂದಿನ ಸಿನಿಮಾ ಮಾಡುತ್ತಿರುವ ನಿರ್ದೇಶಕ ಪ್ರಶಾಂತ್ ನೀಲ್ ಅವರು ಚಿತ್ರದ ತಾತ್ಕಾಲಿಕ ಶೀರ್ಷಿಕೆ ಹಾಗೂ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.

ಹೆಸರು ಅಂತಿಮವಾಗದ ಚಿತ್ರಕ್ಕೆ ತಾತ್ಕಾಲಿಕವಾಗಿ ಹ್ಯಾಶ್ಟ್ಯಾಗ್ ಜೊತೆಗೆ ‘ಎನ್ಟಿಆರ್ನೀಲ್’ (#NTRNEEL) ಎಂಬ ಶೀರ್ಷಿಕೆ ನೀಡಲಾಗಿದೆ.

ಈ ಚಿತ್ರವು 2027ರ ಜೂನ್ 11ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮೇ 20 ರಂದು ಎನ್ಟಿಆರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ ಮೊದಲ ಝಲಕ್ ಅನಾವರಣ ಆಗಲಿದೆ ಎಂದು ಅಧಿಕೃತ ಮಾಹಿತಿ ನೀಡಿದೆ.

ಚಿತ್ರತಂಡವು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪೋಸ್ಟರ್ನಲ್ಲಿ ಇದರಲ್ಲಿ ಎನ್ಟಿಆರ್ ಅವರ ದಿಟ್ಟ ನೋಟವನ್ನು ಕಾಣಬಹದು. ಸದ್ಯ, ಈ ಚಿತ್ರವು ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

ಈ ಚಿತ್ರಕ್ಕೆ ‘ಡ್ರ್ಯಾಗನ್’ ಎಂಬ ಹೆಸರಿಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜ್ಯೂ. ಎನ್ಟಿಆರ್ ಅವರು ಈ ಸಿನಿಮಾಗಾಗಿ ಕೇವಲ 50 ದಿನಗಳಲ್ಲಿ ಸುಮಾರು 9.5 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. ಈ ಕುರಿತ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದವು.

ಈ ಸಿನಿಮಾದಲ್ಲಿ ನಾಯಕಿಯಾಗಿ ರುಕ್ಮಿಣಿ ವಸಂತ್ ಹಾಗೂ ಪ್ರಮುಖ ಪಾತ್ರದಲ್ಲಿ ಅನಿಲ್ ಕಪೂರ್ ಅವರು ನಟಿಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.