ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಯೂ.ಎನ್‌ಟಿಆರ್ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ: ಮುಂದಿನ ವರ್ಷ ಚಿತ್ರೀಕರಣ

Published 5 ಅಕ್ಟೋಬರ್ 2023, 13:46 IST
Last Updated 5 ಅಕ್ಟೋಬರ್ 2023, 13:46 IST
ಅಕ್ಷರ ಗಾತ್ರ

ಹೈದರಾಬಾದ್: ತೆಲುಗಿನ ಸೂಪರ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಅಭಿನಯಿಸುತ್ತಿರುವ ಚಿತ್ರವನ್ನು ‘ಕೆಜಿಎಫ್’ ಸಿನಿಮಾ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ. ಈ ಜೋಡಿಯ ಇನ್ನೂ ಹೆಸರಿಡದ ಚಿತ್ರದ ಶೂಟಿಂಗ್ ಮುಂದಿನ ವರ್ಷ ಏಪ್ರಿಲ್‌ನಿಂದ ಆರಂಭವಾಗಲಿದೆ.

ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ‘ಮೈತ್ರಿ ಮೂವಿ ಮೇಕರ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್’ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

ಈ ಕುರಿತಂತೆ ಮೈತ್ರಿ ಮೂವಿ ಮೇಕರ್ಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ.

‘ತಾರಕ್ ಮತ್ತು ಪ್ರಶಾಂತ್ ನೀಲ್ ಅವರ ಬಹು ನಿರೀಕ್ಷಿತ ಚಿತ್ರದ ಶೂಟಿಂಗ್ ಏಪ್ರಿಲ್, 2024ಕ್ಕೆ ಪ್ರಾರಂಭವಾಗಲಿದೆ. ಈ ಸಿನಿಮಾವು ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲಿದೆ’ ಎಂದು ಎಕ್ಸ್‌ನಲ್ಲಿ ತಿಳಿಸಲಾಗಿದೆ.

‘ಕೆಜಿಎಫ್’ ಚಿತ್ರದ ಮೂಲಕ ಖ್ಯಾತಿ ಗಳಿಸಿರುವ ನಿರ್ದೇಶಕ ಪ್ರಶಾಂತ್ ನೀಲ್, ಪ್ರಭಾಸ್ ನಟನೆಯ ಸಲಾರ್ ಚಿತ್ರಕ್ಕೂ ಆ್ಯಕ್ಷನ್ ಕಟ್ ಹೇಳಿದ್ದಾರೆ. ಜೂನಿಯರ್ ಎನ್‌ಟಿಆರ್ ಅವರ ಹೆಸರಿಡದ ಚಿತ್ರಕ್ಕೂ ಅವರೇ ಚಿತ್ರಕಥೆ ಬರೆದಿದ್ದಾರೆ.

ಕೊರಟಾಲ ಶಿವ ನಿರ್ದೇಶನದ ‘ದೇವರಾ’, ಜೂನಿಯರ್ ಎನ್‌ಟಿಆರ್ ಅವರ ಮುಂದಿನ ಚಿತ್ರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT