ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದ ಜಡ್ಜ್‌ಮೆಂಟ್‌’ ಚಿತ್ರೀಕರಣ ಪೂರ್ಣ

Published 26 ಏಪ್ರಿಲ್ 2024, 0:15 IST
Last Updated 26 ಏಪ್ರಿಲ್ 2024, 0:15 IST
ಅಕ್ಷರ ಗಾತ್ರ

ಕ್ರೇಜಿಸ್ಟಾರ್‌ ರವಿಚಂದ್ರನ್‌ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ದ ಜಡ್ಜ್‌ಮೆಂಟ್‌’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. 

ಜಿ9 ಕಮ್ಯೂನಿಕೇಷನ್‌ ಮೀಡಿಯಾ ಆ್ಯಂಡ್‌ ಎಂಟರ್‌ಟೈನ್ಮೆಂಟ್‌ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದ್ದು, ಶೀಘ್ರದಲ್ಲೇ ತೆರೆಗೆ ಬರಲಿದೆ ಎಂದಿದ್ದಾರೆ ನಿರ್ದೇಶಕ ಗುರುರಾಜ ಕುಲಕರ್ಣಿ. ಈ ಹಿಂದೆ ‘ಆಕ್ಸಿಡೆಂಟ್’, ‘ಲಾಸ್ಟ್‌ ಬಸ್’, ‘ಅಮೃತ ಅಪಾರ್ಟ್‌ಮೆಂಟ್ಸ್’ ಚಿತ್ರಕ್ಕೆ ಗುರುರಾಜ ಆ್ಯಕ್ಷನ್‌ ಕಟ್‌ ಹೇಳಿದ್ದರು. ‘ಈ ಚಿತ್ರವನ್ನು ನಾನು ಸೇರಿದಂತೆ ಐವರು ನಿರ್ಮಾಪಕರು ನಿರ್ಮಿಸಿದ್ದೇವೆ. ಚಿತ್ರವು ಕೋರ್ಟ್ ರೂಮ್ ಥ್ರಿಲ್ಲರ್ ಕಥಾಹಂದರ ಹೊಂದಿದೆ’ ಎಂದಿದ್ದಾರೆ ಗುರುರಾಜ.

ಚಿತ್ರೀಕರಣದ ಕೊನೆಯ ಹಂತದಲ್ಲಿ ನಟಿ ಮೇಘನಾ ಗಾಂವ್ಕರ್‌ ಚಿತ್ರತಂಡ ಸೇರಿಕೊಂಡಿದ್ದು, ರವಿಚಂದ್ರನ್‌ ಜೊತೆಗೆ ತೆರೆಹಂಚಿಕೊಂಡಿದ್ದಾರೆ. ಉಳಿದಂತೆ ದಿಗಂತ್ , ಧನ್ಯಾ ರಾಮ್‌ಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ.ಎಸ್‌.ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ನವಿಲ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಪಿ.ಕೆ.ಎಚ್‌. ದಾಸ್‌ ಛಾಯಾಚಿತ್ರಗ್ರಹಣ, ಕೆಂಪರಾಜ್ ಸಂಕಲನ ಚಿತ್ರಕ್ಕಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT