ಶನಿವಾರ, ಜನವರಿ 22, 2022
16 °C

‘ಜುಗಲ್ ಬಂದಿ‘ಗೆ 20ರಂದು ಮುಹೂರ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುತೂಹಲಕಾರಿ ಕಥಾಹಂದರದೊಂದಿಗೆ ಸೆಟ್ಟೇರುತ್ತಿದೆ ‘ಜುಗಲ್‌ಬಂದಿ’. ಚಿತ್ರದ ಫಸ್ಟ್‌ಲುಕ್‌ ಬಿಡುಗಡೆಯಾಗಿದೆ. 

ಡಿಂಡಿಮ ಪ್ರೊಡಕ್ಷನ್‌ ಅಡಿ ಈ ಚಿತ್ರ ನಿರ್ಮಾಣವಾಗುತ್ತಿದೆ. ದಿವಾಕರ್ ಡಿಂಡಿಮ ಈ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕ. 

ಯಶ್ ಶೆಟ್ಟಿ, ಸಂತೋಷ್ ಆಶ್ರಯ್, ಅಶ್ವಿನ್ ರಾವ್ ಪಲ್ಲಕ್ಕಿ, ಅರ್ಚನಾ ಕೊಟ್ಟಿಗೆ, ಮಾನಸಿ ಸುಧೀರ್ ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

ಥ್ರಿಲ್ಲರ್ ಕಥಾಹಂದರ ಹೊಂದಿರುವ ಜುಗಲ್ ಬಂದಿ ಸಿನಿಮಾಕ್ಕೆ ಪ್ರದ್ಯೋತನ್ ಸಂಗೀತ ನಿರ್ದೇಶನವಿದೆ. ಈ ಹಿಂದೆ ಹಲವು ಸಿನಿಮಾಗಳಿಗೆ ಸಹನಿರ್ದೇಶಕರಾಗಿ ಆಗಿ ಕೆಲಸ ಮಾಡಿದ್ದ ಡಿಂಡಿಮ ಜುಗಲ್ ಬಂದಿ ಸಿನಿಮಾ ಮೂಲಕ ನಿರ್ದೇಶನಾಗಿ ಬಡ್ತಿ ಪಡೆದಿದ್ದಾರೆ.

ಬೆಂಗಳೂರಿನ ವೀರೇಶ್‌ ಚಿತ್ರಮಂದಿರದ ಆವರಣದಲ್ಲಿ ಚಿತ್ರತಂಡ ಶೀರ್ಷಿಕೆ ಬಿಡುಗಡೆ ಮಾಡಿದೆ.
ಜುಗಲ್‌ಬಂದಿಗೆ ಬಾಲಕೃಷ್ಣ ಯಾದವ್, ಸಂತೋಷ್, ಶ್ರೀನಿವಾಸ್ ಸಹನಿರ್ದೇಶಕರು. ಚಿತ್ರಕ್ಕೆ ನ. 20ರಂದು ಮುಹೂರ್ತ ನಿಗದಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು